Home Uncategorized ರೈತರ ಬಂಧನಕ್ಕೆ ಖಂಡನೆ

ರೈತರ ಬಂಧನಕ್ಕೆ ಖಂಡನೆ

ಸಂಜೆವಾಣಿ ವಾರ್ತೆ

ಬಳ್ಳಾರಿ, ಏ.29 ಕುಡಿತಿನಿ ರೈತರು ಭೂ ಸಂತ್ರಸ್ತರ ಕುಟುಂಬದವರಿಗೆ ಉದ್ಯೋಗ ತಮ್ಮ ಭೂ ಬೆಲೆಯನ್ನು ನೀಡಲಾರದೇ  ಇದ್ದುರಿಂದ ನಮ್ಮ ಭೂಮಿಯನ್ನು ವಾಪಸ್ ಕೊಡಿ ಎಂದು ನ್ಯಾಯಯುತವಾಗಿ ಹೋರಾಟ ಮಾಡುತ್ತಿರುವ ರೈತರನ್ನು ಬಂಧಿಸಿದ್ದನ್ನ ಖಂಡಿಸಿ ಹಾಗೂ ರಾಜ್ಯ ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸಿ ನ್ಯಾಯವನ್ನು ಒದಗಿಸಿ ಕೊಡುವಂತೆ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು,  ಕುಡಿತಿನಿ ಮತ್ತು ಸುತ್ತಲ 7 ಹಳ್ಳಿಗಳ ಸುಮಾರು 900.ಎಕ್ಕ-ರೆ ರೈತರ ಜಮೀನನ್ನು ಜಿಂದಾಲ್ ಕಂಪನಿಗೆ ವರ್ಗಾವಣೆ ಮಾಡುವ ತೀರ್ಮಾನದ ವಿರುದ್ದ ಭೂ ಸಂತ್ರಸ್ತರ ರೈತರು ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದಾಗ ಸುಮಾರು 300 ಕ್ಕೂ ಹೆಚ್ಚು ರೈತರನ್ನು ಬಂಧಿಸಿರುವುದು  ಪ್ರತಿಭಟನೆ ನಡೆಸಿ ರೈತರನ್ನು ಬೇಷರತ್ ಬಿಡುಗಡೆ ಮಾಡಿ ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದೆ.

ಕೆಐಎಡಿಬಿ ಜಿಂದಾಲ್ ಕಂಪನಿ ಜೊತೆ ಮಾಡಿಕೊಂಡಿರುವ ಅಕ್ರಮವಾದ ಜಮೀನು ಪರಭಾರೆಯನ್ನು ರದ್ದುಪಡಿಸಬೇಕು, ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಹಾರ ಒದಗಿಸಿ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಅಥವಾ ರೈತರಿಗೆ ಅವರ ಭೂಮಿಯನ್ನು ವಾಪಸು ನೀಡಬೇಕು. ಬಂಧಿಸಿರುವ ಎಲ್ಲಾ ರೈತ ಮುಖಂಡರನ್ನು, ರೈತರನ್ನು ಮತ್ತು ಮಹಿಳೆಯರನ್ನು ಬಿಡುಗಡೆ ಮಾಡಲು ಮಾನ್ಯ ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶಿಸಿ ರೈತರೊಂದಿಗೆ ಮಾತುಕತೆ ನಡೆಸಿ  ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ಶಂಕರ್ ನಂದಿಹಾಳ, ಸಿ ಹನುಮೇಶ್ ಕಟ್ಟಿಮನಿ ಜಿಲ್ಲಾ ಕಾರ್ಯಧ್ಯಕ್ಷ ಟಿ ಶೇಷಪ್ಪ ಜಿಲ್ಲಾ ಖಜಾಂಚಿ ವಿಠಲ್ ದಲಿತ ಮುಖಂಡರು  ಉಮೇಶ್ ಮೇಸ್ತ್ರಿ ಹಾಗೂ ಇನ್ನಿತರ ಭಾಗವಹಿಸಿದ್ದರು