ಲಾರಿ-ಬಸ್ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಸಂಜೆವಾಣಿ ವಾರ್ತೆ
ಹುಣಸೂರು, ಅ.10:-
ಲಾರಿ ಮತ್ತು ಬಸ್ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಡಗನಕೊಪ್ಪಲು ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ.


ಮೈಸೂರಿನಿಂದ ಹುಣಸೂರಿನ ಕಡೆಗೆ ಬರುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿಗೆ ಕೇರಳ ಬಸ್ ಮುಖಾಮುಖಿ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.
ಕ್ಯಾಲಿಕಟ್ ನಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ ಚಾಲಕ ಜಡಗನ ಕೊಪ್ಪಲು ಗೇಟ್ ಬಳಿಯ ಹೆದ್ದಾರಿಯಲ್ಲಿ ಬಿದ್ದಿದ್ದ ಮರದ ತುಂಡಿಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗುವ ಭರದಲ್ಲಿ ಎದುರಿಗೆ ಬರುತ್ತಿದ್ದ ಸಿಮೆಂಟ್ ತುಂಬಿದ ಲಾರಿಗೆ ಢಿಕ್ಕಿ ಹೊಡೆದಿದೆ.


ಪರಿಣಾಮ ಲಾರಿಯಲ್ಲಿದ್ದ ಸಿಮೆಂಟ್ ಮೂಟೆಗಳು ರಸ್ತೆ ಮೇಲೆ ಬಿದ್ದ ಪರಿಣಾಮ ಬಸ್ಸಿನ ಅರ್ಧ ಭಾಗ ನಜ್ಜುಗುಜ್ಜಾಗಿದೆ.
ಬಸ್ ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ ಚಾಲಕನ ಶವ ಲಾರಿ ಅಡಿಯಲ್ಲಿ ಸಿಲುಕಿದ್ದು ಹಲವರಿಗೆ ಗಾಯಗಳಾಗಿದೆ.
ಸಾವನ್ನಪ್ಪಿದವರು ವಯನಾಡು ಜಿಲ್ಲೆಯವರೆಂದು ತಿಳಿದು ಬಂದಿದೆ.


ಘಟನೆ ನಡೆದ ಪರಿಣಾಮಬೆಳ್ಳಿಗೆ 8 ಗಂಟೆಯವರೆವಿಗೂ ಸಂಚಾರ ಅಸ್ತವ್ಯಸ್ತ ಉಂಟಾಗಿದ್ದು. ಪೆÇಲೀಸರು ತೆರವುಗೊಳಿಸಲು ಹರಾಸಾಹಸ ಮಾಡಿದ್ದಾರೆ.