
ಸಂಜೆವಾಣಿ ವಾರ್ತೆ
ನಂಜನಗೂಡು: ಜೂ.05:- ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ- ಕಣೀನೂರು ಮುಖ್ಯ ರಸ್ತೆ ಜೆಪಿ ಹುಂಡಿ ಗ್ರಾಮದ ಬಳಿ ಬುಧವಾರ ಸಂಭವಿಸಿದೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ಹೋಬಳಿಯ ಹಂಚೀಪುರ (ದೇವರಾಯ ಶೆಟ್ಟಿಪುರ) ಗ್ರಾಮದ ಚಿಕ್ಕ ಸ್ವಾಮಿ (45) ಪತ್ನಿ ರೂಪ (38) ಹಾಗೂ ಕಣೇನೂರು ಗ್ರಾಮದ ಚನ್ನಮಲ್ಲಮ್ಮ (55) ಮೃತ ದುರ್ದೈವಿಗಳು.
ಚಿಕ್ಕಸ್ವಾಮಿ, ಪತ್ನಿ ರೂಪ ದಂಪತಿಗಳು ಹಾಗೂ ಚಿಕ್ಕ ಸ್ವಾಮಿ ಅತ್ತೆ ಚನ್ನಮಲ್ಲಮ್ಮ ಎಂಬುವವರು ಕಣೇ ನೂರು ಮುಖ್ಯರಸ್ತೆಯಲ್ಲಿರುವ ಶ್ರೀ ಮಹದೇವ ತಾತ ಸಂಗಮ ಮಠದ ಕಲ್ಯಾಣ ಮಂಟಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮ ಮುಗಿಸಿ, ಅತ್ತೆ ಚೆನ್ನಮಲ್ಲಮ್ಮ ರವರಿಗೆ ಹುಷಾರಿಲ್ಲದ ಕಾರಣ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ರವಸಕ್ಕೆ ಮೂವರ ಮೇಲೆ ಲಾರಿಯ ಚಕ್ರ ಹರಿದಿದೆ. ಪರಿಣಾಮ ಸ್ಥಳದಲ್ಲಿಯೇ ಮೂವರು ಅಸುನೀಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್‍ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್ ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಮಿಳುನಾಡು ಮೂಲದ ಲಾರಿಯಾಗಿದ್ದು, ಅಪಘಾತ ಸಂಬಂಧ ಲಾರಿ ಚಾಲಕನನ್ನು ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತರನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು,
ಈ ಸಂಬಂಧ ಹುಲ್ಲಹಳ್ಳಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.