Home Uncategorized ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ಸುರಕ್ಷತೆಗೆ ಒತ್ತಾಯ

ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ಸುರಕ್ಷತೆಗೆ ಒತ್ತಾಯ

ಸಂಜೆವಾಣಿ ವಾರ್ತೆ

ಬಳ್ಳಾರಿ,ಮಾ.09 ನಗರದ ಪ್ರತಿಷ್ಟಿತ ಗುರುಕಲ ಶಾಲೆಯ ಆಡಳಿತ ಮಂಡಳಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷತೆ ಕಾಪಾಡುವಲ್ಲಿ ಸಂಪೂರ್ಣ ನಿರ್ಲಕ್ಷನ ಮಾಡಿದ್ದರಿಂದ ಹೇಮಂತ್ ವಿದ್ಯಾರ್ಥಿ ಸಾವಿಗೆ ಕಾರಣರಾಗಿದ್ದು ಈ ಶಾಲೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ನಗರದಲ್ಲಿ ಉಳಿದಂತ ಎಲ್ಲಾ ವಸತಿ ನಿಲಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಖಾಸಗಿ ವಸತಿ ನಿಲಯದಲ್ಲಿ ಆಡಳಿತ ಮಂಡಳಿಗಳಿಗೆ ಹಾಗೂ ಸರ್ಕಾರಿ ವಸತಿ ನಿಲಯದಲ್ಲಿ  ಸುರಕ್ಷತೆಯ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಲಿಕ್ಕಾಗಿ ಕಟ್ಟುನಿಟ್ಟಿನ ಆದೇಶ ಮಾಡುವಂತೆ

ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಬಳ್ಳಾರಿ ನಗರದಲ್ಲಿ ಇಂತಹ ಘಟನೆ ನಡೆದಿದ್ದರಿಂದ ಉಳಿದಂತೆ ಪಾಲಕರು ವಸತಿ ನಿಲಯಗಳಲ್ಲಿ ತಮ್ಮ ಮಕ್ಕಳನ್ನು ಬಿಡಲು ಭಯಪಡುವಂತಾಗಿದೆ. ಆದ್ದರಿಂದ ಬಳ್ಳಾರಿ ನಗರದಲ್ಲಿ  ಖಾಸಗಿಯ ಪ್ರತಿಷ್ಠಿತ ಶಾಲಾ ಕಾಲೇಜುಗಳಲ್ಲಿ ಹಾಗೂ ಸರ್ಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುರಕ್ಷತೆಯ ಸೂಕ್ತ ಭದ್ರತೆಯನ್ನು ಒದಗಿಸಲಿಕ್ಕಾಗಿ  ಕಟ್ಟುನಿಟ್ಟಿನ ಶಿಸ್ತಿನ ಆದೇಶ ಮಾಡಬೇಕೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಮನವಿಯಲ್ಲಿ ಒತ್ತಾಯಿಸಿದೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಸಂಘಟನೆಯ 

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ಶಂಕರ್ ನಂದಿಹಾಳ,  ಜಿಲ್ಲಾ ಕಾರ್ಯಧ್ಯಕ್ಷರು ಸಿ ಹನುಮೇಶ್ ಕಟ್ಟಿಮನಿ, ದಲಿತ ಮುಖಂಡ  ಸಿ ರಮೇಶ ಕೊಳಗಲ್, ಮತ್ತಿತರರು ಉಪಸ್ಥಿತರಿದ್ದರು.