ವಾಲ್ಮೀಕಿ ಜಾತ್ರೆ ಸಿಎಂಗೆ ಆಹ್ವಾನ

(ಸಂಜೆವಾಣಿ ವಾರ್ತೆ)

ಬಳ್ಳಾರಿ, ಡಿ.12:  ರಾಜನಹಳ್ಳಿ ವಾಲ್ಮೀಕಿ ಗುರುಪೀಠದ  ಪ್ರಸನ್ನಾನಂದ ಶ್ರೀಗಳ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಸಚಿವರು ಹಾಗೂ ಶಾಸಕರ ನಿಯೋಗವು  ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ವಾಲ್ಮೀಕಿ ಜಾತ್ರೆಯ ಬಗ್ಗೆ ಹಾಗೂ ಸಮುದಾಯದ ಸರ್ಕಾರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಬಿ.ನಾಗೇಂದ್ರ ಇನ್ನಿತರರು ಇದ್ದರು.