ವಾಲ್ ಆಫ್ ಫೋಟೊ ಫ್ರೇಮ್‍ಗೆ ಚಾಲನೆ

ಸಂಜೆವಾಣಿ ವಾರ್ತೆ ಬಳ್ಳಾರಿ, ಜ.31: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಹಳೆಯ ವಿದ್ಯಾರ್ಥಿಗಳ ಫೋಟೊಗಳನ್ನು ಒಳಗೊಂಡ ‘ವಾಲ್ ಆಫ್ ಫೋಟೊ ಫ್ರೇಮ್’ನ್ನು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ಎಂ ಮುನಿರಾಜು ಉದ್ಘಾಟಿಸಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗೌರವಾರ್ಥ ಆಯಾ ಹಳೆಯ ವಿದ್ಯಾರ್ಥಿಗಳ ಫೋಟೋಗಳನ್ನು ವಿಭಾಗದಲ್ಲಿ ಅಳವಡಿಸಲಾಗಿದೆ. ಸುಮಾರು ಎರಡು ದಶಕಗಳಿಂದ ಎಂ.ಬಿ.ಎ. ವಿಭಾಗವು ಬಳ್ಳಾರಿಯಲ್ಲಿ ಶಿಕ್ಷಣ ಸೇವೆ ನೀಡುತ್ತಿದೆ.

ಈ ಸಂದರ್ಭದಲ್ಲಿ ವ್ಯವಹಾರ ಅಧ್ಯಯನ ನಿಕಾಯದ ಡೀನರಾದ ಪ್ರೊ ಸದ್ಯೋಜಾತಪ್ಪ ಎಸ್, ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ ಜಿ ಪಿ ದಿನೇಶ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.