Home ಜಿಲ್ಲೆ ಮೈಸೂರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಜೀವನ ರೂಪಿಸಿಕೊಳ್ಳಿ: ಗಂಗಾಧರಸ್ವಾಮಿ

ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಜೀವನ ರೂಪಿಸಿಕೊಳ್ಳಿ: ಗಂಗಾಧರಸ್ವಾಮಿ

ಸಂಜೆವಾಣಿ ವಾರ್ತೆ
ಮಂಡ್ಯ:ಫೆ.06:
– ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕೆ ಆಸೆ ಪಡದೆ ಉನ್ನತ ಶಿಕ್ಷಣ ಪಡೆದು ತಮ್ಮ ಜೀವನ ವನ್ನು ಉತ್ತಮವಾಗಿ ರೂಪಿಸಿ ಕೊಳ್ಳುವಂತೆ ಅಪರ ಜಿಲ್ಲಾ ಪೆÇಲೀಸ್ ಅಧೀಕ್ಷಕ ಗಂಗಾಧರಸ್ವಾಮಿ ಸಲಹೆ ನೀಡಿದರು.


ಬಿ.ಎಸ್.ಎಸ್. ಸೊನಾಟಾ ಮೈಕ್ರೋ ಕ್ರೆಡಿಟ್ ವತಿಯಿಂದ ನಗರದ ಗಾಂಧೀಭವನದಲ್ಲಿ ನಡೆದ 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕರ?ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನವನ್ನು ಗೋಲ್ಡನ್ ಲೈಫ್ ಎಂದು ಕರೆಯುತ್ತಾರೆ.ಅದೇ ರೀತಿ ವಿದ್ಯಾರ್ಥಿಗಳು ಎಲ್ಲ ಸೌಲಭ್ಯ, ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ವಿದ್ಯಾಭ್ಯಾಸ ಮಾಡಬೇಕು.
ಆ ಮೂಲಕ ಉನ್ನತ ಹುದ್ದೆ ಗಳನ್ನು ಪಡೆದು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.


ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲವೂ ಸ್ಪರ್ಧೆಗೆ ತೆರೆದು ಕೊಳ್ಳುತ್ತಿದೆ.ಇದಕ್ಕೆ ಪ್ರತಿಯೊಬ್ಬರೂ ಸಜ್ಜಾಗಿರ ಬೇಕು.ಹೀಗಾಗಿ ಎಲ್ಲ ವಿದ್ಯಾರ್ಥಿಗಳು ದಿನಪತ್ರಿಕೆ ಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಿಸಿದರು.
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣವನ್ನು ಅತಿಯಾಗಿ ಬಳಸದೆ,ಹಿತ ಮಿತವಾಗಿ ಬಳಸಿಕೊಂಡು ವಿಷಯವನ್ನು ಗ್ರಹಿಸುವುದರೊಂದಿಗೆ ಉಜ್ವಲ ಭವಿಷ್ಯವನ್ನು ರೂಪಿಸಿ ಕೊಂಡಲ್ಲಿ ಎತ್ತರದ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ತಿಳಿಸಿದರು.


ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಎಸ್. ಪಂಚಾಕ್ಷರಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನಮ್ಮ ಸಂಸ್ಥೆಯ ಮೈಕ್ರೋ ಫೈನಾನ್ಸ್ ಸಂಸ್ಥೆಯಲ್ಲಿ ಮಹಿಳೆಯರು ಸಾಲ ಪಡೆದು ತಮ್ಮ ಬದುಕನ್ನು ಉತ್ತಮವಾಗಿ ರೂಪಿಸಿಕೊಂಡಿದ್ದಾರೆ. ದೇಶದಾದ್ಯಂತ 1600 ಶಾಖೆಗಳನ್ನು ಹೊಂದಿದ್ದು, ಎಲ್ಲ ಕಡೆಯೂ ಇಂತಹ ಹಲವಾರು ಸಮಾಜಮುಖೀ ಕಾರ?ಯಕ್ರಮ ಗಳನ್ನು ಮಾಡಲಾಗುತ್ತಿದೆ ಎಂದು ವಿವರಿಸಿದರು.
ಸಾಮಾನ್ಯವಾಗಿ ಹಣಕಾಸು ಸಂಸ್ಥೆಗಳಲ್ಲಿ ಕಿರುಕುಳ ನಡೆಯುತ್ತದೆ ಎಂಬ ಆರೋಪಗಳು ಬರುತ್ತಿವೆ. ನಾವೂ ಸಹ ಅದಕ್ಕೆ ಹೊರತಾಗಿಲ್ಲವಾದರೂ, ನಮ್ಮ ಸಂಸ್ಥೆಯ ಎಲ್ಲ ಶಾಖೆಗಳಲ್ಲೂ ಮಾನವೀಯತೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರು ವುದರಿಂದ ಎಲ್ಲೂ ಯಾವುದೇ ಸಮಸ್ಯೆಗಳು ನಮ್ಮ ನಡುವೆ ಉದ್ಬವವಾಗಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ಕರ?ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.


ಸಂಸ್ಥೆಯ ವತಿಯಿಂದ ಆರೋಗ್ಯ, ಶಿಕ್ಷಣ, ಜೀವನೋಪಾಯ ಕ್ಷೇತ್ರಗಳಿಗೆ ಅನುಕೂಲವಾಗುವಂತೆ ಕರ?ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ 17 ಜಿಲ್ಲೆಗಳಲ್ಲಿ 3500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಚಂದ್ರಕಾಂತ್, ಸಂಸ್ಥೆಯ ರಾಜ್ಯ ಮುಖ್ಯಸ್ಥ ಜಗದೀಶ್, ಸಿಎಸ್‍ಆರ್ ಮುಖ್ಯಸ್ಥ ಪಂಡಿತ್ ಜಿ.ಪಾಟೀಲ್, ಪ್ರಾದೇಶಿಕ ವ್ಯವಸ್ಥಾಪಕ ಬಿ.ಸಿ. ಗಣೇಶ್, ಸಹಾಯಕ ವ್ಯವಸ್ಥಾಪಕ ಪ್ರಶಾಂತ್ ಕುಮಾರ್, ಕ್ಷೇತ್ರ ವ್ಯವಸ್ಥಾಪಕ ರಂಗರಾಜು, ತರಬೇತುದಾರ ಶೇಖರ್ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು