Home ಜಿಲ್ಲೆ ಮೈಸೂರು ವಿದ್ಯಾರ್ಥಿಗಳು ಜ್ಞಾನವನ್ನು ಕೌಶಲ್ಯಗಳಾಗಿ ಪರಿವರ್ತಿಸಿ

ವಿದ್ಯಾರ್ಥಿಗಳು ಜ್ಞಾನವನ್ನು ಕೌಶಲ್ಯಗಳಾಗಿ ಪರಿವರ್ತಿಸಿ

ಸಂಜೆವಾಣಿ ನ್ಯೂಸ್
ಮೈಸೂರು: ಮಾ.07:-
ಜ್ಞಾನವನ್ನು ಕೌಶಲ್ಯಗಳಾಗಿ ಪರಿವರ್ತಿಸಬೇಕು ಎಂದು ಜೆಎಸ್‍ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎ.ಎನ್.ಸಂತೋಷ್ ಕುಮಾರ್ ಅಭಿಪ್ರಾಯಪಟ್ಟರು.


ಸರಸ್ವತಿಪುರಂನ ಜೆಎಸ್‍ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗಣಕ ವಿಜ್ಞಾನ ವಿಭಾಗದ ವತಿಯಿಂದ ರಾಜ್ಯಮಟ್ಟದ ಪ್ರವಿಧಿ-2026 ಫೆಸ್ಟ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜ್ಞಾನವನ್ನು ಕೌಶಲ್ಯಗಳಾಗಿ ಪರಿವರ್ತಿಸಬೇಕು. ಕೌಶಲ್ಯಗಳಿಲ್ಲದ ಪದವಿಗಳು ಪ್ರಯೋಜನಕ್ಕೆ ಬರುವುದಿಲ್ಲ ಎಂದ ಅವರು, ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ಅಗತ್ಯ ಕುರಿತಂತೆ ಒತ್ತಿ ಹೇಳಿದರು.


ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೊಂದಿಕೊಳ್ಳದವರು ಹಿಂದುಳಿದುಬಿಡುತ್ತಾರೆ. ತಂತ್ರಜ್ಞಾನವನ್ನು ಇತರರಿಗೆ ಸಹಾಯ ಮಾಡಲು ಬಳಸಬೇಕು ಮತ್ತು ದುರುಪಯೋಗ ಮಾಡಬಾರದು. ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ಮತ್ತು ಆಕರ್ಷಕ ವ್ಯಕ್ತಿತ್ವ ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ವಿಯಾಗಬಹುದು ಎಂದು ಅವರು ಸಲಹೆ ನೀಡಿದರು. ಈ ಫೆಸ್ಟ್‍ನಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ದೊರೆತಿದೆ ಎಂದು ಹೇಳಿ ಅವರು ಸಂತೋಷ ವ್ಯಕ್ತಪಡಿಸಿದರು.


ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಪೆÇ್ರ.ಎನ್.ನಾಗರಾಜ ಮಾತನಾಡಿ, ಫೆಸ್ಟ್‍ಗಳು ವಿದ್ಯಾರ್ಥಿಗಳಿಗೆ ಅಮೂಲ್ಯ ಪ್ರಾಯೋಗಿಕ ಅನುಭವ ನೀಡುತ್ತವೆ. ತಂತ್ರಜ್ಞಾನ ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಜೀವನದಲ್ಲಿ ಉನ್ನತ ಶ್ರೇಷ್ಠತೆಗೆ ಶ್ರಮಿಸಬೇಕು ಎಂದು ಅವರು ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸಿದರು. ತಂತ್ರಜ್ಞಾನ ಜೀವನದ ಪ್ರತಿ ಕ್ಷೇತ್ರದ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಉಲ್ಲೇಖಿಸಿದರು. ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ನಿರಂತರ ಕಲಿಕೆ ಮತ್ತು ಹೊಂದಿಕೊಳ್ಳುವಿಕೆಯ ಮಹತ್ವ ಗುರುತಿಸಿದರು. ಅಂಕಗಳು ಮಾತ್ರ ಸಾಕಾಗುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳು ನಿಜವಾದ ಪರಿಣತಿ ಮತ್ತು ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

[
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪೆÇ್ರ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಗಣಕ ವಿಜ್ಞಾನ ವಿಭಾಗಕ್ಕೆ ಬೇಡಿಕೆಯಿದ್ದು, ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತದೆ ಎಂದ ಅವರು. ಮಹಿಳಾ ಸಬಲೀಕರಣಕ್ಕೆ ಜೆಎಸ್‍ಎಸ್ ಸಂಸ್ಥೆಯ ಕೊಡುಗೆಯನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ತಂತ್ರಜ್ಞಾನ ಒಳ್ಳೆಯದಕ್ಕಾಗಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ನೆಮ್ಮದಿಯ ಬದುಕಿನ ಕಡೆಗೆ ಸಂತೋಷದಿಂದ ಸಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ರೇಚಣ್ಣ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಸತೀಶ್ ಕುಮಾರ್.ಎಂ ಉಪಸ್ಥಿತರಿದ್ದರು. ಕಾಲೇಜಿನ ಸಿಬ್ಬಂದಿ ವರ್ಗದ ಸದಸ್ಯರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ರೀತು ಪ್ರವಿಧಿ-2026 ಫೆಸ್ಟ್‍ನ ವರದಿ ಮಂಡಿಸಿದರು. ಮೇಘನಾ ಮತ್ತು ತಂಡದವರು ಪ್ರಾರ್ಥಿಸಿದರು. ದೀಪ್ತಿ ಹೆಚ್.ಎಸ್ ಗಣ್ಯರನ್ನು ಸ್ವಾಗತಿಸಿದರು. ಸುಕೃತ.ಎನ್.ಎ ಅಂತಿಮ ವಂದಿಸಿದರು. ಧನ್ಯ.ಆರ್ ಮತ್ತು ಪ್ರತಿಭಾ ಭಟ್, ವಿದ್ಯಾರ್ಥಿನಿಯರು ಕಾರ್ಯಕ್ರಮ ನಿರೂಪಿಸಿದರು.
ಸಮಗ್ರ ಪ್ರಶಸ್ತಿಯನ್ನು ಮೈಸೂರಿನ ಯುವರಾಜ ಕಾಲೇಜು ಪಡೆದರು.