Home ಜಿಲ್ಲೆ ವಿದ್ಯುತ್ ಖಾಸಗೀಕರಣ ವಿರೋಧಿಸಿ ತಾಲೂಕು ರೈತ ಸಂಘದ ಮನವಿ

ವಿದ್ಯುತ್ ಖಾಸಗೀಕರಣ ವಿರೋಧಿಸಿ ತಾಲೂಕು ರೈತ ಸಂಘದ ಮನವಿ

ಸಂಜೆವಾಣಿ ವಾರ್ತೆ

ಹಗರಿಬೊಮ್ಮನಹಳ್ಳಿ, ಜೂ. 23 ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ನೀತಿಯನ್ನು ವಿರೋಧಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಪಟ್ಟಣದಲ್ಲಿ   ಉಪ ತಹಸೀಲ್ದಾರ್ ಶಿವಕುಮಾರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

 ತಾಲೂಕು ರೈತ ಸಂಘದ ಸಂಚಾಲಕ ಶಿಗೇನಹಳ್ಳಿ ಬಸವರಾಜ್,  ಮಾತನಾಡಿ ವಿದ್ಯುತ್ ಖಾಸಗೀಕರಣ ಜಾರಿಯಾದರೆ ರೈತರಿಗೆ ದೊರೆಯುತ್ತಿರುವ ಸೌಲಭ್ಯಗಳು ಕಡಿಮೆಯಾಗುವ ಸಾಧ್ಯತೆ ಇದೆ. ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಪೂರೈಕೆಯನ್ನು ಮುಂದುವರಿಸಿ, ಗ್ರಾಮೀಣ ಪ್ರದೇಶಗಳಲ್ಲಿ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಒದಗಿಸಬೇಕು ಎಂದು ಒತ್ತಾಯಿಸಿದರು.

ತಾಲೂಕು ರೈತ ಸಂಘದ ಮುಖಂಡ ಟಿ. ಕೊಟ್ರೇಶ್ ಮಾತನಾಡಿ, ವಿದ್ಯುತ್ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸುವುದರಿಂದ ರೈತರು ಹಾಗೂ ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ವಿದ್ಯುತ್ ಇಲಾಖೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ಹಳೆಯ ಟ್ರಾನ್ಸ್ಫಾರ್ಮರ್ಗಳು ಸೇರಿದಂತೆ ವಿದ್ಯುತ್ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಾಗೇಶ್, ಸಿ, ನಾಗರಾಜ್. ತಳವಾರ್ ಸೋಮು, ಮಾಬು, ಎಸ್.ಕೆ. ಸೋಮನಾಥ್, ಎಸ್.ಕೆ. ಮಹೇಶ್, ತಂಬ್ರಹಳ್ಳಿ ಮಹೇಶ್, ಮದ್ದಿ ದುರ್ಗಮ್ಮ ಸೇರಿದಂತೆ ತಾಲೂಕು ರೈತ ಸಂಘದ ಪದಾಧಿಕಾರಿಗಳು, ವಿವಿಧ ಗ್ರಾಮಗಳ ರೈತರು ಹಾಗೂ ರೈತ ಹೋರಾಟಗಾರರು ಭಾಗವಹಿಸಿದ್ದರು.