Home ಜಿಲ್ಲೆ ಮೈಸೂರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಸಂಜೆವಾಣಿ ವಾರ್ತೆ
ತಿ.ನರಸೀಪುರ.ಮಾ.04:
– ಮುಖ್ಯಮಂತ್ರಿ ಸಿದ್ದರಾ ಮಯ್ಯರವರು ಪ್ರತಿ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ನೀಡಿದ್ದು, ಮುಖ್ಯಮಂತ್ರಿಗಳ ಮೂಲಸೌಕರ್ಯ ನಿಧಿಯಿಂದ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಂಸದ ಸನೀಲ್ ಬೋಸ್ ಹೇಳಿದರು.


ತಿರುಮಕೂಡಲು ಬಳಿ ಚೌಡಯ್ಯ ವೃತ್ತದ ಬಳಿ 1.50 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಚರಂಡಿ ಹಾಗು ರಸ್ತೆ ಅಗಲೀಕರಣ ಕಾಮಗಾರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪ್ರತಿ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ರೂ.ಗಳ ಅನುದಾನ ನೀಡಿದ್ದಾರೆ. ಅದರಲ್ಲಿ ಈ ವರೆಗೆ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 38.50 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇಂದು ಲೋಕೋಪಯೋಗಿ ಇಲಾಖೆಯ 11ಕೋಟಿ,ಪಂಚಾಯತ್ ರಾಜ್ ಇಲಾಖೆಯ 1.10 ಕೋಟಿ ರೂ.ಗಳ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ.ಈ ಪೈಕಿ ಎಸ್ಸಿಪಿ ಗೆ 1.10 ಕೋಟಿ ಹಾಗು ಸಾಮಾನ್ಯ ವರ್ಗದ ಕಾಲೋನಿ ಅಭಿವೃದ್ಧಿಗೆ 3.55. ಕೋಟಿ ರೂ.ಗಳನ್ನು, ಒಟ್ಟಾರೆ 14.55 ಕೋಟಿ ರೂ.ಗಳನ್ನು ವಿವಿಧ ಅಭಿವೃದ್ಧಿ ಕಾಮಗಾರಿಗೆ ಬಳಕೆ ಮಾಡಲಾಗುತ್ತಿದೆ ಎಂದರು.


ಕ್ಷೇತ್ರದಲ್ಲಿ ನಮಗೆ ಹಾಗು ನಮ್ಮ ತಂದೆಯವರಿಗೆ ಈ ಬಾಗದ ಜನ ಹೆಚ್ಚಿನ ಬಹುಮತ ನೀಡಿ ಹೆಚ್ಚು ಕಾಲದ ರಾಜಕೀಯ ಅಧಿಕಾರ ನೀಡಿದ್ದಾರೆ.ಹಾಗೆಂದ ಮಾತ್ರಕ್ಕೆ ಯಾವುದೇ ಗ್ರಾಮವನ್ನು ಕಡೆಗಣಿಸಲು ಸಾಧ್ಯವಿಲ್ಲ.ಎಲ್ಲ ಗ್ರಾಮಕ್ಕೂ ಅಗತ್ಯಕ್ಕನುಗುಣವಾಗಿ ಅನುದಾನ ನೀಡಿ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಮೈಮೂಲ್ ಮಾಜಿ ಅಧ್ಯಕ್ಷ ಆರ್.ಚೆಲುವರಾಜು ಮಾತನಾಡಿ ಟಿ ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ 300 ಕೋಟಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು,
ಈ ಬಾರಿ ಎಸ್ ಸಿ ಪಿ ಟಿ ಎಸ್ ಪಿ ಮತ್ತು ಹಾಗೂ ಜನರಲ್ ವಾರ್ಡ್ ಗಳಲ್ಲಿ ರಸ್ತೆ ,ಚರಂಡಿಗಳು ಕಾಮಗಾರಿಗಳ ಆರಂಭವಾಗಿವೆ. ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ, ಹಾಗೂ ಸಂಸದ ಸುನಿಲ್ ಬೋಸ್ ರವರು ಕ್ಷೇತ್ರವಾರು ಪ್ರವಾಸ ಕೈಗೊಂಡು ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಪಿ ಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ. ವಜ್ರೇಗೌಡ,ಸಿದ್ದರಾಮ, ಎಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಕೆ.ಎಂ. ಮಧುಕುಮಾರ್, ಪ್ರಥಮ ದರ್ಜೆ ಗುತ್ತಿಗೆದಾರ ಎ.ಎನ್ .ಸ್ವಾಮಿ, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಶಶಿಭೂಷಣ್, ಮಹಿಳಾ ಘಟಕದ ಅಧ್ಯಕ್ಷ ವೀಣಾ ಶಿವಕುಮಾರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಬೃಂದಾ ಕೃಷ್ಣೇಗೌಡ, ಪುರಸಭೆಯ ಮಾಜಿ ಸದಸ್ಯ ಶಿವಣ್ಣ, ಕೊಳತ್ತೂರು ಕೆ.ಎನ್.ಕುಮಾರ್, ಮಹೇಶ್, ನಾಗರಾಜಾಚಾರ್, ಅತ್ತಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಮಹೇಶ್, ಸುನೀಲ್, ಗುತ್ತಿಗೆದಾರ ಉಮೇಶ್, ಕೀರ್ತಿ, ಭಾಸ್ಕರ್, ಲೋಕೇಶ್ ಸೇರಿದಂತೆ ಮತ್ತಿತರರಿದ್ದರು.