
ಸಂಜೆವಾಣಿ ವಾರ್ತೆ
ಬಳ್ಳಾರಿ, ಆ.21: ದೇಶದ ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿಲು ಮತ್ತು ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸುವ ದಿನದ ಪ್ರಯುಕ್ತ ಇಂದು ವಿಶ್ರೀಕೃವಿವಿಯಲ್ಲಿ ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು.
ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದಭಾವವಿಲ್ಲದೇ ದೇಶದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆ ಎಂಬ ಪ್ರತಿಜ್ಞಾ ವಿಧಿಯನ್ನು ವಿವಿಯ ಎಲ್ಲ ಸಿಬ್ಬಂದಿ ಸ್ವೀಕರಿಸಿದರು.
ಹಿಂಸಾಚಾರವನ್ನು ತ್ಯಜಿಸುವಂತೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಪರೀಕ್ಷಾಂಗ ಕುಲಸಚಿವರಾದ ಪ್ರೊ ಎನ್ ಎಂ ಸಾಲಿ ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ. ಡಿ ದೇವರಾಜ ಅರಸುರವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಲಾಯಿತು. ವಿವಿಯ ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರು ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು































