ವಿಶೇಷ ಅಗತ್ಯಯುಳ್ಳ ಮಕ್ಕಳಿಗೆ ಬ್ಲಾಕ್ ಹಂತದಲ್ಲಿ ವೈದ್ಯಕೀಯ ತಪಾಸಣೆ ಮೌಲ್ಯಾಂಕನ ಶಿಬಿರ

ಸಂಜೆವಾಣಿ ವಾರ್ತೆ
ಹನೂರು ನ 5 :-
ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ. ವತಿಯಿಂದ ಸಮನ್ವಯ ಶಿಕ್ಷಣದಡಿ ವಿಶೇಷ ಅಗತ್ಯಯುಳ್ಳ ಮಕ್ಕಳಿಗೆ ಬ್ಲಾಕ್ ಹಂತದಲ್ಲಿ ವೈದ್ಯಕೀಯ ತಪಾಸಣೆ ಹಾಗೂ ಮೌಲ್ಯಾಂಕನ ಶಿಬಿರ ಆಯೋಜನೆ ಮಾಡಲಾಗಿದೆ.


ಹನೂರು ತಾಲ್ಲೂಕಿನಲ್ಲಿ ದಿನಾಂಕ 07-11-2025 ರ ಶುಕ್ರವಾರ ದಂದು ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹನೂರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾಧನ ಸಲಕರಣೆಗಳನ್ನು ಒದಗಿಸುವ ನಿಟ್ಟಿನಲ್ಲಿ ವಿಶೇಷ ಅಗತ್ಯಯುಳ್ಳ ಮಕ್ಕಳಿಗೆ ಬ್ಲಾಕ್ ಹಂತದಲ್ಲಿ ವೈದ್ಯಕೀಯ ತಪಾಸಣೆ ಹಾಗೂ ಮೌಲ್ಯಾಂಕನ ಶಿಬಿರ ಆಯೋಜನೆ ಮಾಡಲಾಗಿದೆ ಎಂದು ಬಿ.ಇ.ಒ ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೆÇೀಷಕರು/ಶಾಲೆಯ ಮುಖ್ಯ ಶಿಕ್ಷಕರು ಈ ಕೆಳಕಂಡ ದಾಖಲೆಗಳಾದ ಯು.ಡಿ.ಐ.ಡಿ ಕಾರ್ಡ್, ಯು.ಡಿ.ಐ.ಡಿ. ಸರ್ಟಿಫಿಕೇಟ್, ವಿದ್ಯಾರ್ಥಿಯ ಆಧಾರ್ ಕಾರ್ಡು, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎರಡು ಪಾಸ್ ಪೆÇೀಟ್ ಪೆÇೀಟೊ, ಬ್ಯಾಂಕ್ ಪಾಸ್ ಪುಸ್ತಕ ದಾಖಲಾತಿಗಳನ್ನು ಕಡ್ಡಾಯವಾಗಿ ತರಬೇಕು ಎಂದು ತಿಳಿಸಿದ್ದಾರೆ.