ವಿಶ್ವ ಅಧಿಕ ರಕ್ತದೊತ್ತಡ ದಿನ

ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಕೋಶ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಇವರ ಸಹಯೋಗದೊಂದಿಗೆ ವಿಶ್ವ ಅಧಿಕ ರಕ್ತದೊತ್ತಡ ದಿನದ ಪ್ರಯುಕ್ತ ಶನಿವಾರ ಸೈಕಲ್ ರ್ಯಾಲಿ ಹಾಗೂ ಕಾಲ್ನಡಿಗೆ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್. ತಿಮ್ಮಯ್ಯ ಹಾಗೂ ವೆನ್ಲಾಕ್ ಆಸ್ಪತ್ರೆ ಅಧೀಕ್ಷಕ ಡಾ|| ಶಿವಪ್ರಕಾಶ್ ಸೈಕಲ್ ರ್ಯಾಲಿ ಹಾಗೂ ಕಾಲ್ನಡಿಗೆ ಜಾಥಕ್ಕೆ ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು. ಜಾಥವು ಮಂಗಳೂರು ಮಹಾನಗರ ಪಾಲಿಕೆಯಿಂದ ಆರಂಭಗೊಂಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯವರೆಗೆ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ಅಧಿಕ ರಕ್ತದೊತ್ತಡದಿಂದಾಗುವ ಪರಿಣಾಮಗಳು ಹಾಗೂ ನಿಯಂತ್ರಣ ಕುರಿತಂತೆ ಮಾಹಿತಿ ನೀಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|| ಜೆಸಿಂತಾ, ತಾಲೂಕು ಆರೋಗ್ಯಾಧಿಕಾರಿ ಡಾ|| ಸುಜಯ್ ಕುಮಾರ್, ಡಾ|| ಅಣ್ಣಯ್ಯ ಕುಲಾಲ್, ಮತ್ತಿತರ ಅಧಿಕಾರಿ/ ಸಿಬ್ಬಂದಿಗಳು ಭಾಗವಹಿಸಿದರು. ಕಾಲ್ನಡಿಗೆ ಜಾಥದಲ್ಲಿ ಜಿಲ್ಲಾ ಎನ್.ಸಿ.ಡಿ ಕೋಶದ ಅಧಿಕಾರಿ/ ಸಿಬ್ಬಂದಿಗಳು ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ ಸ್ವಾಗತಿಸಿದರು. ಡಾ|| ನವೀನ್‌ಚಂದ್ರ ಕುಲಾಲ್ ವಂದಿಸಿದರು.