
ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ದ.ಕ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಇವರ ಸಹಯೋಗದೊಂದಿಗೆ ವಿಶ್ವ ಡೆಂಗ್ಯು ದಿನ ೨೦೨೫ ಕಾರ್ಯಕ್ರಮದ ಪ್ರಯುಕ್ತ ಶನಿವಾರ ಕಾಲ್ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್. ತಿಮ್ಮಯ್ಯ ಹಾಗೂ ಜಿಲ್ಲಾ ವೆನ್ಲಾಕ್ ಅಧೀಕ್ಷಕ ಡಾ|| ಶಿವಪ್ರಕಾಶ್ ಇವರು ಕಾಲ್ನಡಿಗೆ ಜಾಥಕ್ಕೆ ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು. ಜಾಥವು ಬಾವುಟಗುಡ್ಡೆಯಿಂದ ಆರಂಭಗೊಂಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯವರೆಗೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ಡೆಂಗ್ಯು ನಿಯಂತ್ರಣದ ಕುರಿತಂತೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|| ಜೆಸಿಂತಾ ಡಿ’ಸೋಜ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ನವೀನ್ಚಂದ್ರ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ|| ಸುಜಯ್ ಕುಮಾರ್, ಡಾ|| ಅಣ್ಣಯ್ಯ ಕುಲಾಲ್, ಮತ್ತಿತರರು ಭಾಗವಹಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ ಸ್ವಾಗತಿಸಿದರು.