ಶಸ್ತ್ರಾಸ್ತ್ರ ಮಾರಾಟಕ್ಕೆ ಅಮೆರಿಕಕ್ಕೆ ಉಕ್ರೇನ್ ಮನವಿ

ವಾಷಿಂಗ್ಟನ್, ಜು.5:- ರಷ್ಯಾದ ದಾಳಿಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಹೆಚ್ಚಿನ ಸಾಮಥ್ರ್ಯದ ಕ್ಷಿಪಣಿ ಸೇರಿದಂತೆ ಇನ್ನಿತರೆ ಶಸ್ತಾಸ್ತ್ರಗಳನ್ನು ಮಾರಾಟ ಮಾಡುವಂತೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ ಅವರು ಅಮೆರಿಕಾಕ್ಕೆ ಮನವಿ ಮಾಡಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆ ಮಾತುಕತೆ ನಡೆಸಿದ ವೇಳೆ ಈ ಪ್ರಸ್ತಾಪವನ್ನು ಮುಂದಿಟ್ಟಿದ್ಧಾರೆ. ಉಕ್ರೇನ್‍ಗೆ ಪ್ರಮುಖ ಶಸ್ತಾಸ್ತ್ರ ಸರಬರಾಜು ಮಾಡುವುದನ್ನು ನಿಲ್ಲಿಸುವುದರಿಂದ ದೇಶ ರಕ್ಷಣೆಗೆ ಸಮಸ್ಯೆ ಆಗಲಿದೆ, ಈ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರ ಮತ್ತು ಕ್ಷಿಪಣಿ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದೂರವಾಣಿ ಮೂಲಕ ನಡೆಸಿದ ಮಾತುಕತೆ ವೇಳೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ಪ್ರಸ್ತಾಪ ಮುಂದಿಟ್ಟಿದ್ದಾರೆ ಎಂದು ಉನ್ನತ ಮೂಲಕ ತಿಳಿಸಿವೆ.
ಇದೇ ವೇಳೆ ಅಮೆರಿಕಾದೊಂದಿಗೆ ಜಂಟಿ ರಕ್ಷಣಾ ಉತ್ಪಾದನೆ, ರಕ್ಷಣಾ ಉಪಕರಣಗಳ ಖರೀದಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಉಕ್ರೇನ್‍ಗೆ ಕೆಲವು ಶಸ್ತ್ರಾಸ್ತ್ರಗಳ ಸಾಗಣೆ ಮಾಡುವುದನ್ನು ನಿಲ್ಲಿಸಲು ಅಮೇರಿಕಾ ನಿರ್ಧರಿಸಿದ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಜೊತೆ ನಡೆಸಿದ ಮಾತುಕತೆಯ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಷ್ಯಾದ ವೈಮಾನಿಕ ದಾಳಿಗಳು ಮತ್ತು ಯುದ್ಧಭೂಮಿಯ ಮುನ್ನಡೆಗಳ ವಿರುದ್ಧ ರಕ್ಷಿಸುವ ತನ್ನ ಸಾಮಥ್ರ್ಯವನ್ನು ದುರ್ಬಲಗೊಳಿಸುತ್ತದೆ, ಹೀಗಾಗಿ ಪೇಟ್ರಿಯಾಟ್ ವಾಯು ರಕ್ಷಣಾ ವ್ಯವಸ್ಥೆ ಖರೀದಿಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಅಮೆರಿಕಾ ಅದ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದು ಸುಮಾರು 40 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ ಅಗತ್ಯ ಶಸ್ತ್ರಾಸ್ತ್ರ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಉಕ್ರೇನ್‍ನ “ವಾಯು ರಕ್ಷಣಾ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ಅಮೇರಿಕಾ ಅಧ್ಯಕ್ಷರೊಂದಿಗೆ ಸುದೀರ್ಘ ಮಾತುಕತೆ ನಡೆಸಲಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವಲೋಡಿಮಿರ್ ಝೆಲೆನ್ಸ್ಕಿ ಹೇಳಿದ್ಧಾರೆ.