
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.01- ಅತ್ಯಂತ ಹಿಂದುಳಿದ ಉಪ್ಪಾರ ಸಮುದಾಯದ ಏಕೈಕ ಶಾಸಕರಾದ ಸಿ. ಪುಟ್ಟರಂಗಶೆಟ್ಟರಿಗೆ ಸಚಿವ ಸ್ಥಾನ ನೀಡಬೇಕೆಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಆರ್. ರಮೇಶ್ ಒತ್ತಾಯಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೆ ಚಾ.ನಗರ ಜಿಲ್ಲಾ ಕೇಂದ್ರದ ಶಾಸಕರಾದ ಪುಟ್ಟರಂಗಶೆಟ್ಟರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುವ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಶಾಸಕ ಪುಟ್ಟರಂಗಶೆಟ್ಟರು ಸತತ ನಾಲ್ಕನೇ ಬಾರಿ ಶಾಸಕರಾಗಿದ್ದು, ಜನಪ್ರಿಯತೆಯನ್ನು ಹೊಂದಿದ್ದಾರೆ. ದಲಿತರು, ಹಿಂದುಳಿದವರ ಪರ ಮತ್ತು ಅಲ್ಪ ಸಂಖ್ಯಾತರ ಪರ ಕಾಳಜಿಯುಳ್ಳ ಸರಳ ಸಜ್ಜನಿಕೆ ರಾಜಕಾರಣಿಯಾಗಿದ್ದಾರೆ. ಕ್ಷೇತ್ರದಲ್ಲಿ ಸತತವಾಗಿ ಕಾಂಗ್ರೇಸ್ ಪಕ್ಷದಿಂದ ಆಯ್ಕೆಯಾಗುತ್ತಾ ಪಕ್ಷ ನಿμÉ್ಠಯನ್ನು ಹೊಂದಿದ್ದಾರೆ. ಅಭಿವೃದ್ಧಿಯ ವಿಚಾರದಲ್ಲಿ ಅಧಿಕಾರಿಗಳಿಗೆ ಪೆÇ್ರೀತ್ಸಾಹ ನೀಡುವ ಜೊತೆಗೆ ಸಾರ್ವಜನಿಕರಿಗೆ ಪ್ರತಿ ದಿನ ಜಿಲ್ಲಾ ಕೇಂದ್ರದಲ್ಲಿ ಸಿಗುವ ಸರಳ ವ್ಯಕ್ತಿಯಾಗಿದ್ದಾರೆ. ಹೀಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಖರ್ಗೆ ಅವರು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುಟ್ಟರಂಗಶೆಟ್ಟರನ್ನು ಸಚಿವರನ್ನಾಗಿ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಅದ್ಯತೆ ನಿಡಬೇಕು ಎಂದು ರಮೇಶ್ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಛಲವಾದಿ ಮಹಾಸಭಾದ ಸಂಚಾಲಕರಾದ ಎಲ್.ಎಲ್ ಮಹದೇವ್, ಪರಮೇಶ, ಹೊಂಡರಬಾಳು ಸಿದ್ದರಾಜು, ಚಿಂದನಂದ ಮೂರ್ತಿ ಇತರರು ಇದ್ದರು.