
ಸಂಜೆವಾಣಿ ವಾರ್ತೆ
ಚಾಮರಾಜನಗರ, ಡಿ.31:- ಜಿಲ್ಲೆಯುವ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಪ್ರತಿಯೊಂದು ಮಗುವು ಸಹ ಗುಣಮಟ್ಟದ ಶಿಕ್ಷಣವನ್ನು ಪಡೆದು ಜ್ಞಾನವನ್ನು ವೃದ್ದಿಕೊಂಡಾಗ ದೇಶದ ಅಭಿವೃದ್ದಿಯತ್ತ ಸಾಗಲು ಸಾಧ್ಯವಿದೆ ಎಂದು ವೆಂಕಟಯ್ಯನಛತ್ರ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಟೇನಾಯ್ಕ ತಿಳಿಸಿದರು.
ತಾಲೂಕಿನ ಅಂಕನಶೆಟ್ಟಿಪುರದಲ್ಲಿರುವ ಪ್ರೇರಣಾ ವಿದ್ಯಾ ಸಂಸ್ಥೆಯ 15ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಕಲಿಕೆಯಲ್ಲಿ ಆಸಕ್ತಿ ಮೂಡಿಡುವಂತಹ ಕಾರ್ಯಕ್ರಮಗಳು ಶಾಲೆಗಳಲ್ಲಿ ಹೆಚ್ಚು ನಡೆಯಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡರೆ ಉತ್ತಮ ಫಲಿತಾಂಶ ಬರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಕಾರ ಹಲವಾರು ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಕ್ರೀಡಾ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ಮಕ್ಕಳಲ್ಲಿ ಕಲಿಕೆಯ ಉತ್ಸವವನ್ನು ಹೆಚ್ಚುತ್ತದೆ ಎಂದರು.
ಪೋಷಕರು ಸಹ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಜೊತೆಗೆ ಅವರು ದಿನನಿತ್ಯ ಹೋವರ್ಕ್ ಮತ್ತು ಪಾಠ ಪ್ರವಚನಗಳ ಬಗ್ಗೆ ನಿಗಾ ವಹಿಸಬೇಕು. ಮಕ್ಕಳ ಶಾಲೆಯಲ್ಲಿ ಕಲಿತರಷ್ಟೇ ಸಾಲದು ಮನೆಯಲ್ಲಿಯು ಸಹ ಅವರ ಓದಿನ ಜವಾಬ್ದಾರಿಯನ್ನು ಪೋಷಕರು ತೆಗೆದುಕೊಳ್ಳಬೇಕು. ಮಕ್ಕಳಿಗೆ ಮೊಬೈಲ್ ಕೊಟ್ಟು ಅವರನ್ನು ಸೋಮಾರಿಗಳನ್ನಾಗಿ ಮಾಡಿ. ಇದೊಂದು ವ್ಯಸನ ಇದ್ದಂತೆ, ಮಕ್ಕಳನ್ನು ಮೊಬೈಲ್‍ನಿಂದ ದೂರ ಇರುವಂತೆ ನೋಡಿಕೊಳ್ಳಿ ಎಂದರು. ಈ ಭಾಗದಲ್ಲಿ ಪ್ರೇರಣಾ ವಿದ್ಯಾ ಸಂಸ್ಥೆಯು ಗುಣಮಟ್ಟ ಶಿಕ್ಷಣ ನೀಡುವಲ್ಲಿ ಶ್ರಮಿಸುತ್ತಿದೆ. ತನ್ನದೇ ಉತ್ತಮ ಭೋಧಕ ವರ್ಗ ಹಾಗೂ ಅಡಳಿತ ಮಂಡಲಿಯ ಶ್ರಮ ಬಹಳಷ್ಟಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಉಪನ್ಯಾಸಕ ಶ್ರೀಕಾಂತ್ ಮಾತನಾಡಿ, ಮಕ್ಕಳು ಮತ್ತು ಪೋಷಕರಲ್ಲಿ ಪ್ರೇರಣಾದಾಯಕ ಅಂಶಗಳನ್ನು ತುಂಬಿದರು. ತಾಯಿಂದರು ಮಕ್ಕಳಿಗೆ ಮನೆಯಲ್ಲಿ ನೀತಿ ಪಾಠಗಳನ್ನು ಹೇಳಿಕೊಡುವ ಜೊತೆ ಮಕ್ಕಳು ಶಿಕ್ಷಣದ ಕಡೆಗೆ ಹೆಚ್ಚು ಒಲವು ತೋರುವಂತೆ ಮಾಡಬೇಕು. ಇದರಿಂದ ಮಕ್ಕಳ ಮಾನಸಿಕ ಜ್ಞಾನ ಬೆಳೆಯುತ್ತದೆ ಎಂದರು.
ಪ್ರೇರಣಾ ಸಂಸ್ಥೆಯ ಅಧ್ಯಕ್ಷ ಬಿ.ಪಿ. ಪ್ರಕಾಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯು ನಡೆದು ಬಂದ ಹಾದಿಯನ್ನು ಸ್ಮರಿಸಿಕೊಂಡರು. ಹರದನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಉನ್ನತ ವಿದ್ಯಾ ಸಂಸ್ಥೆಯನ್ನು ಮುನ್ನಡೆಸಬೇಕೆಂಬ ನಮ್ಮ ಆಶಯಕ್ಕೆ ಪೋಷಕರ ಬೆಂಬಲ ಸಹಕಾರ ಸದಾ ಇದೆ. ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣವನ್ನು ಸಂಸ್ಥೆಯಡಿಯಲ್ಲಿ ಆರಂಭಿಸಲಾಗುತ್ತದೆ. ಇದಕ್ಕೆ ಸಕಲ ಸಿದ್ದತೆಗಳನ್ನು ಆಡಳಿ ಮಂಡಲಿ ಮಾಡಿಕೊಳ್ಳುತ್ತಿದೆ. ಮಗುವಿಗೆ ಪರಿಪೂರ್ಣ ಶಿಕ್ಷಣನ್ನು ಕೊಡಬೇಕೆಂಬ ನಮ್ಮ ಸಂಕಲ್ಪ ಕ್ಕೆ ತಮ್ಮಲ್ಲರ ಬೆಂಬಲ ಬೇಕು ಎಂದು ಮನವಿ ಮಾಡಿದರು.
ವೆಂಕಟಯ್ಯನಛತ್ರ ಗ್ರಾ.ಪಂ. ಅಧ್ಯಕ್ಷೆ ಲಾವಣ್ಯ ಮಹೇಶ್ ಅವರು ನೂತನ ವರ್ಷದ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಣ್ಣ, ಸಂಸ್ಥೆಯ ಕಾರ್ಯದರ್ಶಿ ವಕೀಲ ಶಿವಸ್ವಾಮಿ, ಸಂಸ್ಥೆಯ ಟ್ರಸ್ಟಿ ನಟರಾಜನ್, ಮುಖ್ಯ ಶಿಕ್ಷಕ ಮಹೇಶ್‍ಶಕುಮಾರ್, ಸಹ ಶಿಕ್ಷಕ ವೃಂದವರು, ಪೋಷಕರು, ವಿದ್ಯಾರ್ಥಿಗಳು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.


























