ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ. 29- ಶಿಕ್ಷಣ ಕ್ಷೇತ್ರಕ್ಕೆ ಜೆಎಸ್‍ಎಸ್ ಸಂಸ್ಥೆ ಕೊಡುಗೆ ಅಪಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು.
ನಗರದ ಜೆಎಸ್‍ಎಸ್ ಮಹಿಳಾ ಕಾಲೇಜು ಆವರಣದಲ್ಲಿ ಜೆಎಸ್‍ಎಸ್ ಮಹಾವಿದ್ಯಾಪೀಠ, ಜೆಎಸ್‍ಎಸ್ ಶಿಕ್ಷಣ ಸಂಸ್ಥೆಗಳು, ಜೆಎಸ್‍ಎಸ್ ಆಸ್ಪತ್ರೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಭಕ್ತ ವೃಂದದ ವತಿಯಿಂದ ಆಯೋಜಿಸಿದ್ದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಗಳ ಶತೋತ್ತರ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸುತ್ತೂರು ಮಠಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಶ್ರೀಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಅವರು ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳ ಬೆಳವಣಿಗೆ ಹಾಗೂ ಮಠದ ಅಭಿವೃದ್ಧಿಗೆ ರಾಜೇಂದ್ರಶ್ರೀಗಳು ಶ್ರಮಿಸಿದ್ದಾರೆ ಎಂದರು.
ಚಾಮರಾಜನಗರ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಶೈಕ್ಷಣಿಕವಾಗಿ ಬದಲಾವಣೆ ತಂದು ಕ್ರಾಂತಿ ಮಾಡಿದವರು ಸುತ್ತೂರುಶ್ರೀಗಳು, ಜೆಎಸ್‍ಎಸ್ ಸಂಸ್ಥೆಯ ಮೂಲಕ ದೇಶ ವಿದೇಶಗಳಲ್ಲೂ ಶೈಕ್ಷಣಿಕ ಸಂಸ್ಥೆಗಳನ್ನು ತೆರೆದು ಶಿಕ್ಷಣ ನೀಡಲಾಗುತ್ತಿದೆ. ಶಿಕ್ಷಣ ಸಂಸ್ಥೆ ಜೊತೆಗೆ ಸಾಮಾಜಿಕ, ಧಾರ್ಮಿಕ ಸಾಮರಸ್ಯ ಮೂಡಿಸುವ ಕೆಲಸ ಮಾಡಲಾಗುತ್ತಿದೆ.
ಬಡ ಮಕ್ಕಳಿಗೆ ಉಚಿತ ಶಿಕ್ಷಣ ಕೊಡುತ್ತಿರುವುದು ಶ್ಲಾಘನೀಯ. ಇದರಿಂದ ಬಡವರು. ಮಧ್ಯಮ ವರ್ಗದವರಿಗೆ ಬಹಳ ಅನುಕೂಲವಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಜಾತಿ ಜಾತಿಗಳ ನಡುವೆ ಸಂಘರ್ಷ ನಡೆಯುತ್ತಿದೆ. ಶಾಂತಿ, ಸಾಮರಸ್ಯ ತರುವ ಕೆಲಸವನ್ನು ಮಠ ಮಾನ್ಯಗಳು ಮಾಡುತ್ತಿವೆ. ದೇಶಾಭಿಮಾನ, ಸಂಸ್ಕøತಿ ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕಿದೆ. ಪ್ರಸ್ತುತ ಜೀವನದಲ್ಲಿ ಮೊಬೈಲ್ ಪ್ರಮುಖ ಬಳಕೆಯಾಗಿದೆ. ಯುವ ಜನಾಂಗವು ಸಂಸ್ಕೃತಿ ಪರಂಪರೆಯನ್ನು ಉಳಿಸಬೇಕಿದೆ. ಬಸವಣ್ಣ ಅವರ ತತ್ವಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಸಲಹೆ ನೀಡಿದರು.
2012ರಲ್ಲಿ ಜೆಎಸ್‍ಎಸ್ ಕಾಲೇಜು ಕಟ್ಟಡ ಉದ್ಘಾಟನೆಗೆ ನಾನು ಚಾ.ನಗರಕ್ಕೆ ಬಂದಿದ್ದೆ. ಕುಡಿಯುವ ನೀರಿನ ಯೋಜನೆ ಸೇರಿದಂತೆ ಇತರೆ ಹಲವು ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿದ್ದೇನೆ. ಚಾ.ನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎಂದು ಹೇಳಿದರು. ಕೇಳದೆ ನಾನು ಮೂರು ಬಾರಿ ಚಾನಗರಕ್ಕೆ ಬಂದಿದ್ದೇನೆ. ಬಸವಣ್ಣ ಅವರ ಅನುಯಾಯಿಯಾಗಿ ಮೂಢನಂಬಿಕೆಗೆ ನಾನು ಜೋತು ಬೀಳುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಶ್ರೀ ಶಿವರಾತ್ರಿದೇಶೀಕೇಂದ್ರ ಮಹಾಸ್ವಾಮೀಜಿ, ಶಾಸಕ ಸಿ.ಪುಟ್ಟರಂಗಶೆಟ್ಟಿ, ಸಾಹಿತಿ ಪೆÇ್ರ.ಎಂ.ಕೃಷ್ಣಗೌಡ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ಅಧ್ಯಕ್ಷ ಹೊಂಗನೂರು ಚಂದ್ರು, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಧ್ಯಕ್ಷ ಮಹಮ್ಮದ್ ಅಸ್ಗರ್, ನಗರಸಭೆ ಅಧ್ಯಕ್ಷ ಸುರೇಶ್, ಸದಸ್ಯೆ ಕುಮುದಾ ಕೇಶವಮೂರ್ತಿ, ಜೆಎಸ್‍ಎಸ್ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ. ಸ್ವಾಮಿ ಮೊದಲಾದವರು ಇದ್ದರು.

























