ಶಿಕ್ಷೆ ಪೂರ್ಣಗೊಳಿಸಿದ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ನಿರ್ದೇಶನ


ನವದೆಹಲಿ,ಆ.೧೨-ಶಿಕ್ಷೆಯ ಅವಧಿಯನ್ನು ಮೀರಿ ಜೈಲಿನಲ್ಲಿರುವ ಅಪರಾಧಿಗಳನ್ನು ಗುರುತಿಸಿ ತಕ್ಷಣ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ.
ಯಾವುದೇ ಅಪರಾಧಿ ಜೈಲಿನಲ್ಲಿ ಉಳಿದಿದ್ದರೆ, ಬೇರೆ ಯಾವುದೇ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ, ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಕೆ.ವಿ. ವಿಶ್ವನಾಥ್ ಅವರ ಪೀಠವು ಈ ನಿರ್ದೇಶನವನ್ನು ನೀಡಿದೆ.
ಶಿಕ್ಷೆಯ ಪೂರ್ಣ ಅವಧಿಯನ್ನು ಪೂರ್ಣಗೊಳಿಸಿದ ಆರೋಪಿಯನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದ ವಿಚಾರಣೆಯ ಸಂದರ್ಭದಲ್ಲಿ ಈ ಆದೇಶ ಬಂದಿದೆ.
ನ್ಯಾಯಾಲಯವು ತನ್ನ ಆದೇಶವನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಕಳುಹಿಸುವಂತೆ ನಿರ್ದೇಶಿಸಿದೆ, ಅವರು ಕಟ್ಟುನಿಟ್ಟಿನ ಅನುಸರಣೆಗಾಗಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಿಗೆ ತಲುಪುವುದನ್ನು ಧೃಡಪಡಿಸಲಿದ್ದಾರೆ.