ಶೀಘ್ರ ಟ್ರಂಪ್-ಜಿನ್‌ಪಿಂಗ್ ಭೇಟಿ ನಿರೀಕ್ಷೆ


ವಾಷಿಂಗ್ಟನ್,ಸೆ.೭- ಅಮೆರಿಕಾ ಮತ್ತು ಚೀನಾ ನಡುವೆ ಕಳೆದ ಹಲವು ವರ್ಷಗಳಿಂದ ವಿವಿಧ ವಿಷಯಗಳಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿರುವ ನಡುವೆ ಮುಂದಿನ ತಿಂಗಳು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ ಮಾಡುವ ಸಾಧ್ಯತೆಗಳಿವೆ

ದಕ್ಷಿಣ ಕೊರಿಯಾದಲ್ಲಿ ಉಭಯ ನಾಯಕ ಭೇಟಿ ಮತ್ತು ಮಾತುಕತೆಗೆ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿವೆ. ಟ್ರಂಪ್- ಕ್ಸಿ ನಡುವಿನ ಭೇಟಿಯ ವೇಳೆ ದ್ವಿಪಕ್ಷೀಯ ಮಾತುಕತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಉನ್ನತ ಸಲಹೆಗಾರರು ಅಕ್ಟೋಬರ್‌ನಲ್ಲಿ ದಕ್ಷಿಣ ಕೊರಿಯಾಕ್ಕೆ ಪ್ರಯಾಣಿಸಲು ಮೌನವಾಗಿ ತಯಾರಿ ನಡೆಸುತ್ತಿದ್ದಯ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ, ಆದರೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ

ಅಕ್ಟೋಬರ್ ಅಂತ್ಯ ಮತ್ತು ನವೆಂಬರ್ ಆರಂಭದಲ್ಲಿ ಜಿಯೊಂಗ್ಜು ನಗರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ

ಕಳೆದ ತಿಂಗಳು ಉಭಯ ನಾಯಕರು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು ಈ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿಯನ್ನು ಚೀನಾಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ, ಇದಕ್ಕೆ ಪ್ರತಿಯಾಗಿ ಡೊನಾಲ್ಡ್ ಟ್ರಂಪ್ ಕೂಡ, ಅಮೇರಿಕಾಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ

ಉಭಯ ನಾಯಕರ ಪರಸ್ಪರ ಭೇಟಿಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ, ಈ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಡೊನಾಲ್ಡ್ ಟ್ರಂಪ್ ಆಡಳಿತ ಅಮೆರಿಕದಲ್ಲಿ ಹೆಚ್ಚಿನ ಆರ್ಥಿಕ ಹೂಡಿಕೆ ಆಕರ್ಷಿಸಲು ಮುಂದಾಗಿದೆ ಎನ್ನಲಾಗಿದೆ. ಸೌದಿ ಅರೇಬಿಯಾ, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸ ಸೇರಿದಂತೆ ಅವರ ಇತ್ತೀಚಿನ ವಿದೇಶ ಪ್ರವಾಸಗಳ ಪ್ರಮುಖ ಕೇಂದ್ರಬಿಂದುವಾಗಿದೆ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ.