
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಮೇ.24: ಪಟ್ಟಣ ವ್ಯಾಪ್ತಿಯ ಹೊಸಹೊಳಲಿನ ಸಂಘಟಕಿ ಮಂಜುಳಾಗೆ ‘ ಶೀ ಪವರ್ ಅವಾಡ್ರ್ಸ್ ‘ ಪ್ರಶಸ್ತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ ಶೀ ಪವರ್ ಅವಾರ್ಡ್ ಹಾಗೂ ಕಾನ್ ಕ್ಲೇವ್ 2026 ರ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಧನೆ ಪರಿಶ್ರಮ ಸಂಘಟನೆ ಸಮಾಜಕ್ಕೆ ನೀಡುತ್ತಿರುವ ವಿವಿಧ ಕೊಡುಗೆಗಳನ್ನು ಸೇವೆಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಹೊಸಹೊಳಲು ಮಂಜುಳಾ ಇಂಟೀರಿಯಮ್ ಮಂಡಲ, ಮತ್ತು ಪುರಸಭಾ ಸದಸ್ಯರಾಗಿ, ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿರ್ದೇಶಕರಾಗಿ, ಜಿಲ್ಲಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ನಿರ್ದೇಶಕರಾಗಿ ಪ್ರಮುಖ ಪಾತ್ರ ವಹಿಸಿರುತ್ತಾರೆ.ರಾಜ್ಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಯುವ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ .
ವಿವಿಧ ಸಂಘ-ಸಂಸ್ಥೆಗಳು ನೀಡುವ ಹಲವಾರು ಸಾಧನಾ ಪ್ರಶಸ್ತಿಗಳನ್ನು ಜಿಲ್ಲಾ ಹಾಗೂ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಗೌರವಗಳನ್ನು ಪಡೆದಿದ್ದಾರೆ ಹೊಸಹೊಳಲಿನ ಪ್ರತಿಭಾ ಮಹಿಳಾ ಮಂಡಳಿ, ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ, ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘ, ಶ್ರೀ ಕೋಟೆ ಬೈರವೇಶ್ವರ ವ್ಯಾಪಾರಸ್ಥರ ಪತ್ತಿನ ಸಹಕಾರ ಸಂಘ, ತಾಲೂಕು ಮಹಿಳಾ ಒಕ್ಕೂಟ , ಕೋಟೆ ಬೈರವೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷರಾಗಿ ಮಂಜುಳಾ ಕೆಲಸ ನಿರ್ವಹಿಸುತ್ತಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಮಂಜುಳಾ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಬಂದಿರುವುದಕ್ಕೆ ಶಾಸಕ ಹೆಚ್.ಟಿ.ಮಂಜು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಹೆಚ್.ಕೆ.ಅಶೋಕ್ ಮಿತ್ರ ಫೌಂಡೇಶನ್ ಅಧ್ಯಕ್ಷ ವಿಜಯರಾಮೇಗೌಡ, ಮನ್ ಮುಲ್ ನಿರ್ದೇಶಕ ಡಾಲುರವಿ, ಎಂ.ಬಿ.ಹರೀಶ್ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.





























