Home ಜಿಲ್ಲೆ ಸಂಜೆ ಬಿಡಿಏಏ ಸಭಾಂಗಣದಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರದ ಸಭೆ

ಸಂಜೆ ಬಿಡಿಏಏ ಸಭಾಂಗಣದಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರದ ಸಭೆ

oplus_2097152

(ಸಂಜೆವಾಣಿ ಪ್ರತಿನಿಧಿಯಿಂದ)

ಬಳ್ಳಾರಿ: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆ, ಇದರಿಂದಾಗಿ ಸಾರ್ವಜನಿಕರಿಗೆ ಆಗುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಲು ಇಂದು ಫೆ.26 ರಂದು ಸಂಜೆ 4 ಗಂಟೆಗೆ ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ..

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ನೇತೃತ್ವದಲ್ಲಿ. ಮಹಾನಗರ ಪಾಲಿಕೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಜೆಸ್ಕಾಂ ಇಲಾಖೆ, ಲೋಕೋಪಯೋಗಿ ಮತ್ತು ಕೆಕೆಆರ್ಟಿಸಿ ಇಲಾಖೆಗಳ ಅಧಿಕಾರಿಗಳನ್ನ ಒಳಗೊಂಡು ನಡೆಯುವ ಈ ಸಭೆಯಲ್ಲಿ . ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರು, ಸದಸ್ಯರು, ಕಿರಾಣಿ ಅಂಗಡಿ ವ್ಯಾಪಾರಸ್ಥರು, ಖಾಸಗಿ ಬಸ್ ಮಾಲೀಕರು, ಚಾಲಕರು, ಲಾರಿ ಸಂಘದ ಅಧ್ಯಕ್ಷರು, ಸದಸ್ಯರು, ಆಟೋ, ಟ್ಯಾಕ್ಸಿ ಯೂನಿಯನ್, ಅಧ್ಯಕ್ಷರು, ಮಾಲೀಕಕರು, ಚಾಲಕರು,, ಬೀದಿ ಬದಿ ವ್ಯಾಪಾರಸ್ಥರು ಮತ್ತು ನಗರದ ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ- ಸೂಚನೆ ನೀಡಬಹುದು ಎಂದು ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

ಸಭೆಯಲ್ಲಿ ಆಟೋಗಳು ಎಲ್ಲಂದರಲ್ಲಿ ನಿಲ್ಲಿಸುವುದು, ಬಾರ್, ಹೊಟೇಲ್ ಗಳ ಮುಂದೆ ನಿಗಧಿಗಿಂತ ಹೆಚ್ಚಿನ ಸಾಲಿನಲ್ಲಿ ಬೈಕ್ ಗಳನ್ನು ನಿಲ್ಲಿಸುವುದು. ಟ್ರಾಫಿಕ್ ಸಿಗ್ನಲ್ ಉಲ್ಲಂಘನೆ, ಫುಟ್ ಪಾತ್ ಒತ್ರವರಿ ಮೊದಲಾದವುಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸಭೆ ನಿರ್ಣಯಿಸಬೇಕಿದೆ.