ಸಂಧ್ಯ ಸುರಕ್ಷ ಟ್ರಸ್ಟ್‍ನ 20ನೇ ವಾರ್ಷಿಕೋತ್ಸವ

ಸಂಜೆವಾಣಿ ನ್ಯೂಸ್
ಮೈಸೂರು: ನ.03:
– ಸಂಧ್ಯ ಸುರಕ್ಷ ಟ್ರಸ್ಟ್‍ನ 20ನೇ ವಾರ್ಷಿಕೋತ್ಸವ ನಗರದ ದೇವಯ್ಯನಹುಂಡಿ ಹುಣಸೆಮರದ ಬಸ್ ತಂಗುದಾಣದ ಬಳಿ ಇರುವ ಶಾಕಂಬರಿ ಧಾರ್ಮಿಕ ಕೇಂದ್ರದಲ್ಲಿ ಭಾನುವಾರ ನಡೆಯಿತು.


ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಟಿ.ಎಸ್.ಶ್ರೀವತ್ಸ ವಿಶೇಷ ಆಹ್ವಾನಿತರಾಗಿದ್ದರು. ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕನ್ನಡ ಚಳವಳಿಗಾರ ಮೂಗೂರು ನಂಜುಂಡಸ್ವಾಮಿ ಪ್ರಶಸ್ತಿ ಪ್ರದಾನ ಮಾಡಿದರು. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಟ್ರಸ್ಟ್ ಅಧ್ಯಕ್ಷ ಬಿ.ಆರ್.ನಟರಾಜ ಜೋಯಿಸ್, ಸಮಾಜ ಸೇವಕಿ ಮಂಗಳಾ ಜೋಯಿಸ್‍ಮುಖ್ಯ ಅತಿಥಿಗಳಾಗಿದ್ದರು.
ಜಿಲ್ಲಾ ಕಸಾಪ ಕಾರ್ಯದರ್ಶಿ ಮ.ನ.ಲತಾ ಮೋಹನ್, ಉಷಾ, ವಿಜಯಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು.


ವಿಪ್ರ ಮುಖಂಡರಾದ ಬಿ.ವಿ.ಶೇಷಾದ್ರಿ, ಪುಷ್ಪಾ ಅಯ್ಯಂಗಾರ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡ ವಿಕ್ರಾಂತ್ ಪಿ.ದೇವೇಗೌಡ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಹೊಯ್ಸಳ ಕನ್ನಡ ಸಂಘದ ಕಾರ್ಯದರ್ಶಿ ರಂಗನಾಥ್ ಮೈಸೂರು ಹಾಗೂ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ತೇಜಸ್ ಲೋಕೇಶ್‍ಗೌಡ ಅವರಿಗೆ ಸಂಧ್ಯ ಸುರಕ್ಷ ಪ್ರಶಸ್ತಿ-2025 ಪ್ರದಾನ ಮಾಡಲಾಯಿತು.