
ಸಂಪಾಜೆ ಗ್ರಾ.ಪಂ. ವತಿಯಿಂದ ವಿವಿಧ ಕಾಮಗಾರಿ ಉದ್ಘಾಟನೆ ಮತ್ತು ಸವಲತ್ತು ವಿತರಣೆ
ಸುಳ್ಯ:ಗ್ರಾಮಗಳ ಅಭಿವೃದ್ಧಿಯಿಂದ ನಿಜವಾದ ರಾಮ ಸ್ವರಾಜ್ಯ ಮೂಲಕ ಗಾಂಧೀಜಿಯ ಕನಸನ್ನು ನನಸು ಮಾಡಿ ಸಂಪಾಜೆ ಗ್ರಾಮ ಪಂಚಾಯಿತಿ ದೇಶಕ್ಕೆ ಮಾದರಿಯಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ. ಎ. ಗಫೂರ್ ಹೇಳಿದರು
ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೭ ಕೋಟಿ ಅನುದಾನಗಳ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಪರಿಶಿಷ್ಠ ಜಾತಿಯ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ಮಾಡಿ ಮಾತನಾಡಿದರು.
ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ಮಾತನಾಡಿ ಸಂಪಾಜೆ ಗ್ರಾಮ ಸರ್ವ ಧರ್ಮ ಸೌಹಾರ್ದತೆಯ ಪ್ರತೀಕ, ಎಲ್ಲರೂ ಪಕ್ಷ ಭೇದ ಜಾತಿ ಭೇದ ಮರೆತು ಒಂದಾದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ ಎಂದರು.
ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ ಶಕ್ತಿವೇಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷ ಶಾಲೆಟ್ ಪಿಂಟೋ, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿತಾ ಓಲ್ಗಾ ಡಿ ಸೋಜಾ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಫಯಾಜ್ ಅಹ್ಮದ್, ಕುಡಿಯುವ ನೀರು, ನೈರ್ಮಲ್ಯ ವಿಭಾಗ ಇಂಜಿನಿಯರ್ ಚೈತ್ರಾ ಉಪಸ್ಥಿತರಿದ್ದರು.






























