
ಸಂಜೆವಾಣಿ ವಾರ್ತೆ
ಬಳ್ಳಾರಿ, ಅ.24: ನವದೆಹಲಿಯ ಸಂಸತ್ ಆವರಣದಲ್ಲಿನ *ಪ್ರೇರಣಾ ಸ್ಥಳದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಜನ್ಮ ಜಯಂತಿ ಮತ್ತು 202ನೇ ವಿಜಯೋತ್ಸವವನ್ನು* ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಹಾಗೂ ತುಮಕೂರು ಸಂಸದ ವಿ. ಸೋಮಣ್ಣ* ಅವರ ನೇತೃತ್ವದಲ್ಲಿ ಇಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ*, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್*, ಸಂಸದ ಪಿ.ಸಿ. ಮೋಹನ್*, *ಡಾ. ಸುಧಾಕರ್*, ಮಾಜಿ ಸಚಿವರಾದ ಮುರಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್*, ಕರ್ನಾಟಕ ರಾಜ್ಯದ ಮಾಜಿ ನವದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್*, ಕೂಡಲಸಂಗಮದ ಪೂಜ್ಯ ಬಸವ ಮೃತ್ಯುಂಜಯ ಸ್ವಾಮೀಜಿ*, *ಶ್ರೀ ಶಂಕರಾನಂದ ಸ್ವಾಮೀಜಿ, ಶ್ರೀ ಸಿದ್ದಾರೂಢರ ಮಠ, ಆಳೂರು, ಬೀದರ್*, *ಶ್ರೀ ಆತ್ಮಾರಾಮ ಸ್ವಾಮೀಜಿ, ಗುರುದೇವ ಆಶ್ರಮ, ಕಕ್ಕಮರಿ*, *ಶ್ರೀ ವಿನಾಯಕ ಸ್ವಾಮೀಜಿ, ಶ್ರೀ ಸಿದ್ದಾರೂಢ ಮಠ, ಚಳಕಾಪುರ* *ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಮಾಜಿ ಅಧ್ಯಕ್ಷ ಮತ್ತು ಪಂಚಮಸಾಲಿ ಜಗದ್ಗುರು ಪೀಠದ ಧರ್ಮದರ್ಶಿಗಳಾದ ಶ್ರೀ ಬಾವಿ ಬೆಟ್ಟಪ್ಪನವರು ಶ್ರೀ ಬಸವರಾಜ್ ದಿಂಡೂರು ಹಾಗೂ ರಾಜ್ಯಾಧ್ಯಕ್ಷ ಶಂಕರ ಆರ್ ಬಿಸರಳ್ಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪರಮೇಶ್ ಪಟ್ಟಣಶೆಟ್ಟ* ಹಾಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ ಕನ್ನಡಿಗರು ಮತ್ತು ದೆಹಲಿಯ ಅಪಾರ ಸಂಖ್ಯೆಯ ಕನ್ನಡಿಗರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರು, “ರಾಷ್ಟ್ರ ಕಂಡ ಅಪ್ರತಿಮ ಮಹಿಳಾ ಸೇನಾನಿ, ಕಿತ್ತೂರು ಮಹಾ ಸಂಸ್ಥಾನದ ವೀರವನಿತೆ ರಾಣಿ ಚೆನ್ನಮ್ಮನವರ ಜನ್ಮದಿನೋತ್ಸವ ಹಾಗೂ ಬ್ರಿಟಿಷರ ವಿರುದ್ಧದ ಅವರ 202ನೇ ವರ್ಷದ ವಿಜಯೋತ್ಸವದ ಸಂಭ್ರಮದಲ್ಲಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು” ಎಂದು ಕೋರಿದರು.
ರಾಣಿ ಚೆನ್ನಮ್ಮನ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಈ ಕಾರ್ಯಕ್ರಮಕ್ಕೆ ಆಗಮಿಸಿ, ತಮ್ಮ ಗೌರವ ಉಪಸ್ಥಿತಿಯಿಂದ ಕಾರ್ಯಕ್ರಮಕ್ಕೆ ಮೆರುಗು ನೀಡಿದ ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರಿಗೆ ಹಾಗೂ ಕೇಂದ್ರ ಜಲಶಕ್ತಿ ಸಚಿವ ಶ್ರೀ ಸಿ.ಆರ್. ಪಾಟೀಲ್ ಅವರಿಗೆ ನಾಡಿನ ಸಮಸ್ತ ಜನರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.
“ಕಿತ್ತೂರು ರಾಣಿ ಚೆನ್ನಮ್ಮ ಕೇವಲ ಯುದ್ಧ ಮಾಡಿದ ರಾಣಿಯಲ್ಲ, ಅವರು ಒಂದು ಸಾಮ್ರಾಜ್ಯಶಾಹಿ ಶಕ್ತಿಗೆ ಸವಾಲೆಸೆದು, ಪ್ರತಿರೋಧದ ಅಮರ ಸಂಕೇತವಾಗಿ ಇತಿಹಾಸದಲ್ಲಿ ಉಳಿದ ವೀರ ಮಹಿಳೆ. ಇಂತಹ ವೀರ ಮಹಿಳೆಯ ಸಾಧನೆಯನ್ನು ಸಂಭ್ರಮಿಸುವ ಅವಕಾಶ ನಮಗೆ ಸಿಕ್ಕಿರುವುದು ಅತ್ಯಂತ ಸಂತೋಷದ ಸಂಗತಿ” ಎಂದು ಸಚಿವರು ನುಡಿದರು.
“ಭಾರತೀಯ ಸಂಸತ್ತಿನ ಈ ಪವಿತ್ರ ಸ್ಥಳದಲ್ಲಿ ವೀರವನಿತೆ ರಾಣಿ ಚೆನ್ನಮ್ಮನವರ ಶೌರ್ಯ, ಧೈರ್ಯ, ಕಿಚ್ಚು ಇಂದು ದೇಶ ಕಾಯುವ ವೀರರಿಗೆ ಸ್ಫೂರ್ತಿ. ನಾಡು-ನುಡಿ ಅಭಿಮಾನವುಳ್ಳ ನಮ್ಮ ನಿಮ್ಮೆಲ್ಲರಿಗೂ ಇದು ಕೀರ್ತಿ. ಪ್ರತಿವರ್ಷವೂ ನಾವು ನೀವೆಲ್ಲರೂ ಇಲ್ಲಿ ಸೇರೋಣ, ಇಂತಹ ಮಹನೀಯರನ್ನು ನೆನೆಯೋಣ” ಎಂದು ಕನ್ನಡಿಗರಲ್ಲಿ ಮನವಿ ಮಾಡಿದರು.
ಪ್ರತಿವರ್ಷ ಈ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟು, ನಮಗೆಲ್ಲರಿಗೂ ಪ್ರೇರಣಾದಾಯಕ ಶಕ್ತಿಯಾಗಿರುವ ಪ್ರಧಾನಿ ನರೇಂದ್ರ ಮೋದಿ* ಅವರಿಗೆ ನಾಡಿನ ಸಮಸ್ತ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.
ಸಂಸತ್ತಿನ ಆವರಣದಲ್ಲಿ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿ ಸಹಕರಿಸುತ್ತಿರುವ ಹೆಮ್ಮೆಯ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ, ಲೋಕಸಭೆ ಮತ್ತು ರೈಲ್ವೆ ಸಚಿವಾಲಯದ ಅಧಿಕಾರಿಗಳಿಗೆ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್* ಅವರಿಗೂ ಸಹ ಅಭಿನಂದನೆ ಸಲ್ಲಿಸಿದರು.
ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಪ್ರತಿವರ್ಷ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಕಾರ್ಯವೈಖರಿಯ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವ ಮೃತ್ಯುಂಜಯ ಸ್ವಾಮೀಜಿಗಳು* ಅತ್ಯಂತ ಹರ್ಷ ವ್ಯಕ್ತಪಡಿಸಿದರು.





















