
(ಸಂಜೆವಾಣಿ ಪ್ರತಿನಿಧಿಯಿಂದ )
ಬಳ್ಳಾರಿ, ಆ.11: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವಂಚನೆ ಪ್ರಕರಣದ ಆರೋಪಿ ಸಚಿವ ಬಿ.ನಾಗೇಂದ್ರ ಅವರಿಗೆ ದೇಶಾದ್ಯಂತ ಓಡಾಡಲು ಹೈಕೋರ್ಟ್ ಅನುಮತಿಸಿದೆ.
ಈಮೊದಲು ಅವರು ರಾಜ್ಯ ಬಿಟ್ಟು ತೆರಳದಂತೆ ನಿರ್ಬಂಧ ಹಾಕಿತ್ತು ಹೈಕೋರ್ಟ್.
ಪ್ರಕರಣದಲ್ಲಿ ನಾಗೇಂದ್ರಗೆ ಜಾಮೀನು ಮಂಜೂರು ಮಾಡಿದ ಸಂದರ್ಭದಲ್ಲಿ ನ್ಯಾಯಾಲಯದ ಪೂರ್ವಾನು ಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳುವಂತಿಲ್ಲ ಎಂದು ಜನಪ್ರತಿನಿಧಿಗಳ ಕೋರ್ಟ್ ಷರತ್ತು ವಿಧಿಸಿತ್ತು. ಈಗ ಸಂಪುಟ ಸಚಿವರಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಅಧಿಕೃತ ಕರ್ತವ್ಯ ನಿರ್ವಹಣೆಗಾಗಿ ರಾಜ್ಯ ಬಿಟ್ಟು ಹೊರಗೆ ಪ್ರಯಾಣಿಸಬೇಕಾಗುತ್ತದೆ. ಹಾಗಾಗಿ ಷರತ್ತು ಸಡಿಲಿಸಬೇಕು. ದೆಹಲಿಗೆಪ್ರಯಾಣಿಸಲು ಅನುಮತಿ ನೀಡಬೇಕು ಎಂದು ಕೋರಿ ನಾಗೇಂದ್ರ ಅವರ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಇದರಿಂದ ನಾಗೇಂದ್ರ ಹೈಕೋ ರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನೆಡಸಿದ ನ್ಯಾ. ಎಂ.ನಾಗಪ್ರಸನ್ನ ಅವರ ಪೀಠ ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಷರತ್ತಿಗೆ ತಡೆಯಾಜ್ಞೆ ನೀಡಿದೆ. ನಾಗೇಂದ್ರ ಅವರು ದೇಶದಾದ್ಯಂತ ಮಾತ್ರ ಪ್ರಯಾಣಿಸಬ ಹುದು. ಆದರೆ, ಹೊರದೇಶಕ್ಕೆ ಪ್ರಯಾಣಿಸುವಂತಿಲ್ಲ ಎಂದು ಆದೇಶ ಮಾಡಿದೆ. ನಂತರ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸೂಚಿಸಿ ವಿಚಾರಣೆಯನ್ನು ಆ.12ಕ್ಕೆ ಮುಂದೂಡಿದೆ































