
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಸೆ.09: ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕೀಹೊಳಿ ಅಚರ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿರುವುದು ಬಿಜೆಪಿಯ ಕುತಂತ್ರವಾಗಿದೆಂದು ಕಾಂಗ್ರೆಸ್ ಮುಖಂಡ ವಿ.ಕೆ.ಬಸಪ್ಪ ಆರೋಪಿಸಿದ್ದಾರೆ.
ಬಿಜೆಪಿಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇರವಾಗಿ ಚುನಾವಣೆ ಮಾಡದೇ ಅಡ್ಡ ದಾರಿಯಲ್ಲಿ ಗೆಲ್ಲಬೇಕು ಎಂದು ಕರ್ನಾಟಕದಲ್ಲಿ
ಕೇವಲ ಎಸ್ಸಿ, ಎಸ್ಟಿ ನಾಯಕರನ್ನು ಟಾರ್ಗೆಟ್ ಮಾಡಿ ಇಡಿ, ಸಿಬಿಐ ದಾಳಿ ಮಾಡಿಸುತ್ತಿದ್ದಾರೆ.
ರಾಜ್ಯದಲ್ಲಿ ಜೋಡಿ ಎತ್ತುಗಳಂತೆ ಇರುವ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸತೀಶ್ ಜಾರಕೀಹೊಳಿ ಅವರ ನೇತೃತ್ವದಲ್ಲಿ 2028 ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಬರುತ್ತೆ ಅಂತಾ ಅಧಿಕಾರ ದುರ್ಧಾಬಳಕೆ ಮಾಡಿಕೊಂಡು ಬಿಜೆಪಿ ದಾಳಿ ನಡೆಸುತ್ತಿದೆ ಇದು ಸರಿಯಲ್ಲ. ಹೀಗೆ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ನಮ್ಮ ವಾಲ್ಮೀಕಿ ಸಮುದಾಯ ಬಿಜೆಪಿಗೆ ತಕ್ಕ ಪಾಠಕಲಿಸಲಿದೆಂದಿದ್ದಾರೆ.

























