
ಸಂಜೆವಾಣಿ ವಾರ್ತೆ
ಸಿರುಗುಪ್ಪ:ನ,27- ಸಮಾನತೆ, ಭ್ರಾತೃತ್ವ ಹಾಗೂ ಸಹೋದರತೆ ಸಾರಿದ ನಮ್ಮ ದೇಶದ ಸಂವಿಧಾನ ಶ್ರೇಷ್ಠವಾಗಿದ್ದು, ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಂವಿಧಾನದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಹೇಳಿದರು.
ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಹೊನ್ನುರಮ್ಮ ದಿ.ಸಿದ್ದಪ್ಪ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂವಿಧಾನ ದಿನಾಚರಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು. ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂವಿಧಾನವನ್ನು ಓದಬೇಕು. ಸಂವಿಧಾನದಲ್ಲಿನ ವಿಷಯಗಳನ್ನು ಅರಿತುಕೊಳ್ಳಬೇಕು ತಿಳಿಸಿದರು.
ಪತ್ರಿಕೆ ಬಿಡುಗಡೆ: ಹೊನ್ನುರಮ್ಮ ದಿ.ಸಿದ್ದಪ್ಪ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ಯುವ ಸೂಧಿರ್ಥಿ ಪತ್ರಿಕೆಯನ್ನು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಬಿಡುಗಡೆಗೊಳಿಸಿದರು.

























