ಸರಳಾದೇವಿ ಕಾಲೇಜಿನ ವಿದ್ಯಾರ್ಥಿಗಳು ಅಂತರ ವಿಶ್ವವಿದ್ಯಾಲಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ


(ಸಂಜೆವಾಣಿ ವಾರ್ತೆ)
ಬಳ್ಳಾರಿ ಅ 30
ಇತ್ತೀಚಿಗೆ  ನಡೆದ ಅಂತರ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುವ  ಸರಳಾದೇವಿ ಕಾಲೇಜಿನ ವಿದ್ಯಾರ್ಥಿನಿಯರಾದ ವಂದನಾ,ಸರಿತಾ ಮತ್ತು ನೀಲಮ್ಮ  ತಮಿಳುನಾಡಿನ ಚೆನ್ನೈನಲ್ಲಿ ನಡೆಯಲಿರುವ ಅಂತರ ವಿಶ್ವವಿದ್ಯಾಲಯಗಳ ಕಬ್ಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಸದರಿ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ
ಡಾ. ಪ್ರಹ್ಲಾದ್ ಚೌದ್ರಿ ಹಾಗೂ ಕ್ರೀಡಾ ವಿಭಾಗದ ಸಂಚಾಲಕ ಡಾ. ಟೆಂಗುರಿ ಬಸವರಾಜ್  ಶ್ಲಾಘಿಸಿದ್ದಾರೆ.