ಸಸಿಗಳನ್ನು ನೆಟ್ಟು ಪೋಷಣೆ ಮಾಡಿ ಉತ್ತಮ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ನಂಜುಂಡಪ್ರಸಾದ್

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ 11-
ಸಸಿಗಳನ್ನು ನೆಟ್ಟು ಪೋಷಣೆ ಮಾಡಿ ಉತ್ತಮ ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್ ತಿಳಿಸಿದರು.


ತಾಲೂಕಿನ ಕುದೇರಿನಲ್ಲಿರುವ ಹಾಲು ಒಕ್ಕೂಟದ ಅವರಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ ಕುದೇರು, ಸಹಕಾರ ಇಲಾಖೆ ಮತ್ತು ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಸಹಯೋಗದಲ್ಲಿ ನಡೆದ ಅಂತರರಾಷ್ಟ್ರೀಯ ಸಹಕಾರಿ ವರ್ಷಾಚರಣೆ ಪ್ರಯುಕ್ತ ತಾಯಿಯ ಹೆಸರಿನಲ್ಲಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ನಂಜುಂಡಸ್ವಾಮಿ ಅವರೊಂದಿಗೆ ಒಂದು ಸಸಿಯನ್ನು ನೆಟ್ಟು ನೀರು ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉತ್ತಮ ಗಾಳಿ, ನೀರು ಇದ್ದರೆ ಮಾತ್ರ ನಾವೆಲ್ಲರು ಆರೋಗ್ಯವಂತರಾಗಿ ಜೀವನ ಮಾಡಲು ಸಾಧ್ಯವಿದೆ. ನಗರೀಕರಣ, ಕೈಗಾರಿಕೆಗಳ ಸ್ಥಾಪನೆಯಿಂದ ಅರಣ್ಯ ನಾಶವಾಗುತ್ತಿದೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ. ನಮ್ಮ ಸುತ್ತಮುತ್ತಲಿನ ವಾತಾವರಣವು ಸಹ ಹಸಿರಿನಿಂದ ಕೂಡಿರಬೇಕು. ಹೀಗಾಗಿ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕು ಎಂದು ಕರೆ ನೀಡಿದರು.


ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ಮಾತನಾಡಿ, ಚಾಮುಲ್ ಅವರಣವನ್ನು ಹಸರೀಕರಣ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ. ಘಟಕ ಸುತ್ತಮುತ್ತಲಿನಲ್ಲಿಯು ಸಸಿಗಳನ್ನು ನೆಟ್ಟು ಉತ್ತಮ ಪರಿಸರವನ್ನು ನಿರ್ಮಾಣ ಮಾಡಲಾಗಿದೆ. ಇಂದು ಸಹ ಅಂತರರಾಷ್ಟ್ರೀಯ ಸಹಕಾರ ವರ್ಷಾಚರಣೆಯನ್ನು ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಕಾರ್ಯಕ್ರಮವ ಬಹಳ ಅರ್ಥ ಪೂರ್ಣವಾಗಿ ಆಚರಿಸಲಾಗಿದೆ. ನಾವೆಲ್ಲರು ರೈತರ ಮಕ್ಕಳು ಉತ್ತಮ ಪರಿಸರವನ್ನು ನಿರ್ಮಾಣ ಮಾಡೋಣ. ನಮ್ಮ ಮಕ್ಕಳು ಹಾಗೂ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಚಾಮುಲ್ ನಿರ್ದೇಶಕರಾದ ಎಚ್.ಎಸ್. ಬಸವರಾಜು, ಸದಾಶಿವಮೂರ್ತಿ, ಸಾಹುಲ್ ಅಹಮದ್, ಶೀಲಾ ಪುಟ್ಟರಂಗಶೆಟ್ಟಿ, ಕಮರವಾಡಿ ರೇವಣ್ಣ, ಸಹಕಾರ ಯೂನಿಯನ್ ಉಪಾಧ್ಯಕ್ಷ ರಾಯಪ್ಪನ್, ನಿರ್ದೇಶಕರಾದ ಮಹದೇವಪ್ರಭು, ಪ್ರಭುಸ್ವಾಮಿ, ರವಿ, ಮಹದೇವಸ್ವಾಮಿ, ದಾಕ್ಷಾಯಿಣಿ, ಚಾಮುಲ್ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್, ಸಹಕಾರ ಸಂಘಗಳು ಉಪ ನಿಬಂಧಕರಾದ ಜ್ಯೊತಿ ಅರಸು, ಸಹಾಯಕ ನಿಬಂಧಕರಾದ ಶೋಭಾ, ಅಧೀಕ್ಷಕÀ ನಾಗೇಶ, ಅಭಿವೃದ್ದಿ ಅಧಿಕಾರಿಗಳಾದ ಸುಭಾಷಿನಿ, ಸಿದ್ದಲಿಂಗಮೂರ್ತಿ, ಚಾಮುಲ್ ವ್ಯವಸ್ಥಾಪಕ ಶರತ್‍ಕುಮಾರ್, ಸಹಾಯಕ ವ್ಯವಸ್ಥಾಪಕ ಡಾ.ಅಮರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನುಜ, ಮ್ಯಾನೇಜರ್ ಮಲ್ಲಿಕಾರ್ಜುನಸ್ವಾಮಿ, ಮಲ್ಲೇಶ್, ಕೆಂಡಗಣ್ಣಸ್ವಾಮಿ, ಚಾಮುಲ್, ಸಹಕಾರ ಯೂನಿಯನ್ ಒಕ್ಕೂಟದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಇದ್ದರು.