ಸಾರಿಗೆ ನೌಕರರ ಮುಷ್ಕರ: ಮಂಗಳವಾರ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತ – ಪ್ರಯಾಣಿಕರು ಪರದಾಟ

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಆ.06:-
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಪರಿಣಾಮ ಕೆ.ಆರ್.ಪೇಟೆ ಡಿಪೆÇೀದಿಂದ ಯಾವುದೇ ಬಸ್ಸುಗಳು ಮಂಗಳವಾರ ರಸ್ತೆಗೆ ಇಳಿಯಲಿಲ್ಲ. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದ ಪರಿಣಾಮ ಗ್ರಾಮೀಣ ಪ್ರದೇಶದ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡಬೇಕಾಯಿತು.


ಸಾರಿಗೆ ಸಂಸ್ಥೆಯ ನೌಕರರ ಮುಷ್ಕರದ ಪರಿಣಾಮ ಕೆ.ಆರ್.ಪೇಟೆ ಪಟ್ಟಣದ ಮಾರ್ಗವಾಗಿ ನಾಡಿನ ಇತರ ಜಿಲ್ಲೆಗಳನ್ನು ಸಂಪರ್ಕಿಸುವ ಹೊರಗಿನ ಡಿಪೆÇೀಗಳ ಬಸ್ ಸಂಚಾರವೂ ಸ್ಥಗಿತಗೊಂಡಿದ್ದ ಪರಿಣಾಮ ಪಟ್ಟಣದಿಂದ ಮೈಸೂರು, ಮಂಡ್ಯ, ಬೆಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೋಗ್ಗ ಸೇರಿದಂತೆ ದಕ್ಷಿಣ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುವ ಸಾರಿಗೆ ವ್ಯವಸ್ಥೆಯ ಕೊಂಡಿ ಕಳಚಿ ಬಿದ್ದಿತ್ತು. ಇದರ ಪರಿಣಾಮ ದೈನಂದಿನ ವ್ಯವಹಾರಗಳಿಗೆ ನಿತ್ಯ ಸಂಚರಿಸುವ ಪ್ರಯಾಣಿಕರು ಸಂಕಷ್ಠಕ್ಕೆ ಸಿಲುಕಿದ್ದರು. ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ಗ್ರಾಮೀಣ ಪ್ರದೇಶದಿಂದ ಆಗಮಿಸುವ ವಿದ್ಯಾರ್ಥಿಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿದ್ದು ಬಹುತೇಕ ಶಾಲಾ ಕಾಲೇಜುಗಳಲ್ಲಿ ಹಾಜರಾತಿಯ ಕೊರತೆ ಕಾಣುತ್ತಿತ್ತು. ಗ್ರಾಮೀಣ ಸಾರಿಗೆ ಸಂಪರ್ಕ ಕಡಿತಗೊಂಡಿದ್ದ ಪರಿಣಾಮ ಪಟ್ಟಣದ ದೈನಂದಿನ ವಾಣಿಜ್ಯ ವ್ಯಹಾರಗಳೂ ಕುಂಠಿತಗೊಂಡಿದ್ದವು. ಬಸ್ ಸಂಚಾರವಿಲ್ಲದೆ ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ಪಟ್ಟಣದ ಬಸ್ ಡಿಪೆÇೀನಲ್ಲಿ 76 ಬಸ್ಸುಗಳಿದ್ದು ಚಾಲಕರು ಮತ್ತು ನಿರ್ವಾಹಕರು 152 ಕ್ಕೂ ಅಧಿಕ ಜನರಿದ್ದಾರೆ. ನಿತ್ಯ 70 ಷೆಡ್ಯೂಲ್ ಬಸ್ ಸಂಚಾರ ನಡೆಯುತ್ತಿತ್ತು. ಸಾರಿಗೆ ನೌಕರರ ಮುಷ್ಕರದ ಪರಿಣಾಮ ಡಿಪೆÇೀನಿಂದ ಒಂದೇ ಒಂದು ಬಸ್ಸುಗಳು ರಸ್ತೆಗೆ ಇಳಿಯಲಿಲ್ಲ. ಅಹಿತಕರ ಘಟನೆಗಳು ನಡೆಯದಂತೆ ಡಿಪೆÇೀ ಮ್ಯಾನೇಜರ್ ಉಮಾ ಮಹೇಶ್ವರಿ ಡಿಪೆÇೀ ಬಾಗಿಲು ಬಂದ್ ಮಾಡಿಸಿ ಕಾವಲು ವ್ಯವಸ್ಥೆ ಮಾಡಿದ್ದರು. ಮತ್ತಷ್ಟು ಬಸ್ಸುಗಳನ್ನು ಚಲಾಯಿಸದೆ ಸಾರಿಗೆ ಇಲಾಖೆಯ ಚಾಲಕರು ಬಸ್ ನಿಲ್ದಾಣದಲ್ಲಿಯೇ ಬಸ್ಸುಗಳನ್ನು ಸಾಲಾಗಿ ನಿಲ್ಲಿಸಿ ಮುಷ್ಕರಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಡಿಸಿದರು.


ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ಯಾವುದೇ ತೊಂಡರೆಯಾಗದಂತೆ ಖಾಸಗಿ ವಾಹನಗಳ ವ್ಯವಸ್ಥೆ ಮಾಡುವುದಾಗಿ ರಾಜ್ಯ ಸರ್ಕಾರ ಜನರಿಗೆ ಭರವಸೆ ನೀಡಿದ್ದರೂ ಅದು ಪೆÇಳ್ಳು ಭರವಸೆಯಾಗಿಯೇ ಉಳಿಯಿತು. ಸುಗಮ ಸಂಚಾರಕ್ಕಾಗಿ ಪಟ್ಟಣದ ಬಸ್ ಡಿಪೆÇೀ ಮೂಲಕ 54 ಖಾಸಗಿ ವಾಹನಗಳಿಗೆ ಬೇಡಿಕೆ ಸಲ್ಲಿಸಿದ್ದರೂ ಆರ್.ಟಿ.ಓ ಇಲಾಖೆ ಕೇವಲ 11 ವಾಹನಗಳ ವ್ಯವಸ್ಥೆ ಮಾಡಿತ್ತು. ಇದರಿಂದ ಸಾರ್ವಜನಿಕರಿಗೆ ಅಗತ್ಯ ಸಾರಿಗೆ ವ್ಯವಸ್ಥೆಯ ಕೊರತೆ ಎದುರಾಗಿತ್ತು. ಸಾರಿಗೆ ಇಲಾಖಾ ನೌಕರರ ಮುಷ್ಕರದ ಲಾಭ ಪಡೆದ ಖಾಸಗಿ ವಾಹನಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಒಳಗೆ ಆಗಮಿಸಿ, ರಾಜಾರೋಷವಾಗಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಅವರು ತಲುಪಬೇಕಾದ ನಿರ್ದಿಷ್ಟ ಸ್ಥಳಗಳಿಗೆ ದುಬಾರಿ ಹಣ ಪಡೆದು ತಲುಪಿಸುತ್ತಿದ್ದಿದ್ದು ವಿಶೇಷವಾಗಿತ್ತು.


ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಅನಿರ್ದಿಷ್ಟ ಅವಧಿ ಮುಷ್ಕರ ನಡೆಸುತ್ತಿರುವ ಮಾಹಿತಿ ಇಲ್ಲದೆ ಬಸ್ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ವಾಹನಗಳ ಸಂಚಾರವು ಸಂಪೂರ್ಣವಾಗಿ ಸ್ತಬ್ಧವಾಗಿರುವುದರಿಂದ ಪರದಾಡಬೇಕಾಯಿತು.