ಸಂಜೆವಾಣಿ ನ್ಯೂಸ್
ಮೈಸೂರು:ಅ.16:– ಮೈಸೂರಿನ ಸತ್ಯನಗರದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮತಗಳ್ಳತನ ಕುರಿತು ಸಾರ್ವ ಜನಿಕ ಸಹಿ ಸಂಗ್ರಹ ಜಾಗೃತಿ ಅಭಿಯಾನ ನಡೆಸಲಾಯಿತು.
ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ತನ್ವೀರ್ ಸೇಠ್ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರು,
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಮತಗಳ್ಳತನ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ವಾಗಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿರುವ ಮತಗಳ್ಳತನ ಜಾಗೃತಿ ಅಭಿಯಾನ ಯಶಸ್ವಿಯಾಗ ಬೇಕು. ಪ್ರತೀ ಮನೆ ಮನೆಗೂ ಭೇಟಿ ನೀಡಿ ಮತದಾನದ ಅರಿವು ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಮಾಡುತ್ತಿರುವ ವಂಚನೆ ಬಗ್ಗೆ ತಿಳಿಹೇಳಬೇಕು ಎಂದು ಸೂಚಿಸಿದರು.
ಅಜೀಜ್ ಸೇಠ್ ಬ್ಲಾಕ್ ಅಧ್ಯಕ್ಷ ಸೈಯದ್ ಇಕ್ಬಾಲ್ ಮಾತನಾಡಿ, ಕೆಪಿಸಿಸಿ ನಿರ್ದೇಶನದ ಮೇರೆಗೆ ಮತಗಳ್ಳತನ ಜಾಗೃತಿ ಅಭಿಯಾನ ನಡೆಸಲಾಗುತ್ತಿದ್ದು, ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ತಮ್ಮ ತಮ್ಮ ಮತವನ್ನು ಕಾಪಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಬೇಕು. ಬೂತ್ ಮಟ್ಟದಲ್ಲಿ ತಂಡಗಳನ್ನು ರಚನೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಕ್ಷೇತ್ರ ವಾರಣಾಸಿಯಲ್ಲೇ ಮತಗಳ್ಳತನವಾಗಿದೆ. ಹಾಗಾಗಿ ಎಚ್ಚರ ವಹಿಸಬೇಕು ಎಂದರು.
ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇಕ್ಬಾಲ್ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಮಂದಿ ಸಹಿ ಸಂಗ್ರಹ ಜಾಗೃತಿ ಅಭಿಯಾನದಲ್ಲಿ ಭಾಗ ವಹಿಸಿದ್ದರು.
ಈ ಸಂದರ್ಭದಲ್ಲಿ ಮೈಸೂರು ನಗರಾಧ್ಯಕ್ಷ ಆರ್ ಮೂರ್ತಿ, ಶಾಸಕ ತನ್ವೀರ್ ಸೇಠ್, ಅಜೀಜ್ ಸೇಠ್ ಬ್ಲಾಕ್ ಅಧ್ಯಕ್ಷ ಸೈಯದ್ ಇಕ್ಬಾಲ್, ಉಪಾಧ್ಯಕ್ಷ ಷಹೀನ್ ಷ್, ಕಾಂಗ್ರೆಸ್ ಮುಖಂಡರಾದ ಅಪೆÇ್ರೀಚ್ ಖಾನ್, ರೆಹಾನ್ ಬೇಗ್, ರಾಜೇಶ್, ಮೊಹಮ್ಮದ್ ಇರ್ಫಾನ್, ಮೊಹಮ್ಮದ್ ಶಿಫ್ಟನ್, ಉದಯ್ ಕುಮಾರ್, ಮಾಜಿನಗರ ಪಾಲಿಕೆ ಸದಸ್ಯರಾದ ಪ್ರದೀಪ್ ಚಂದ್ರ, ಸೈಯದ್ ಹಶ್ರತ್ ಉಲ್ಲಾ, ಕೆಪಿಸಿಸಿ ಸಂಯೋಜಕರು ಶೌಕತ್ ಅಲಿಖಾನ್, ಮೈಸೂರಿನ ನಗರ ಪ್ರಧಾನ ಕಾರ್ಯದರ್ಶಿ ಪ್ರತಾಪ್, ಮುನ್ನ,ಇನ್ನು ಮುಂತಾದವರು ಭಾಗಿಯಾಗಿದ್ದರು.



























