
ಸಂಜೆವಾಣಿ ವಾರ್ತೆ
ಪಿರಿಯಾಪಟ್ಟಣ.ಮೇ.18: ಸಾಲ ಬಾಧೆ ತಾಳಲಾರದೆ ರೈತನೊರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಬಟೂರು ಗ್ರಾಮದಲ್ಲಿ ನಡೆದಿದೆ. ರೈತ ರಾಮೇಗೌಡ (62) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ ಜಮೀನಿನಲ್ಲಿ ವಿಷ ಸೇವಿಸಿದ್ದು, ಪಿರಿಯಾಪಟ್ಟಣ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ 4 ದಿನ ಚಿಕಿತ್ಸೆ ಪಡೆದು, ಚಿಕಿತ್ಸೆ ಪಾಲಕರಿಸದೆ ಸಾವನ್ನಪ್ಪಿದ್ದಾರೆ. ಬ್ಯಾಂಕ್ ಹಾಗೂ ಕೈಸಾಲ ಸೇರಿ ಒಟ್ಟು 15 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಕಳೆದ ಮೂರು-ನಾಲ್ಕು ವರ್ಷಗಳಿಂದ ತನ್ನ ಜಮೀನಿನಲ್ಲಿ ಬೆಳೆದ ಬೆಳೆ ಲಾಭವಿಲ್ಲದೆ ತೀವ್ರ ಹಾನಿಯಾಗಿತ್ತು ಇದರಿಂದ ತೀವ್ರ ಮನನೊಂದು ಸಾಲ ಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಪಿರಿಯಾಪಟ್ಟಣ ಪೆÇೀಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.