ಸಾಹಿತ್ಯ ಸಮ್ಮೇಳನಕ್ಕೆ 40 ಕೋಟಿ ನೀಡಲು ಮನವಿ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜೂ.17: ನಗರದಲ್ಲಿ ನಡೆಯಲಿರುವ ಅಖಿಲ ಭಾರತ 88 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಂಸ್ಕೃತಿ ಇಲಾಖೆಯ ವಾರ್ಷಿಕ ಕ್ರಿಯೆ ಯೋಜನೆಯಲ್ಲಿ ಈಗಾಗಲೇ ಹತ್ತು ಕೋಟಿ ರೂಪಾಯಿಗಳನ್ನು ಮೀಸಲಿರಿಸಿದ್ದು, ಬಳ್ಳಾರಿಯಲ್ಲಿ ನಡೆಯಲಿರುವ  ಸಾಹಿತ್ಯ ಸಮ್ಮೇಳನಕ್ಕೆ ಅಂದಾಜು 40 ಕೋಟಿ ರೂಪಾಯಿಗಳ ಅನುದಾನದ ಅವಶ್ಯಕತೆ ಇದ್ದು,  ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಬಿಡುಗಡೆ ಮಾಡಿರುವ ಅನುದಾನಕ್ಕಿಂತ 30 ಕೋಟಿ ರೂಪಾಯಿಗಳ ಹೆಚ್ಚುವರಿ ಅನುದಾನವನ್ನು ನೀಡಬೇಕೆಂದು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿಯವರನ್ನು ಕಾರಟಗಿಯ ಅವರ ನಿವಾಸದಲ್ಲಿ ಕಂಡು ಮನವಿಯನ್ನು ಸಲ್ಲಿಸಲಾಯಿತು.
ಕಸಾಪ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ ಮತ್ತಿತರರು ತೆರಳಿ ಮನವಿ ಸಲ್ಲಿಸಿ  ಈ ಹಿಂದೆ ನಡೆದಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಖರ್ಚ ವೆಚ್ಚಗಳ ಹಿನ್ನೆಲೆಯನ್ನು ಪರಿಗಣಿಸಿ ಅನುದಾನ ಹೆಚ್ಚಿಗೆ ಅವಶ್ಯಕತೆ ಇದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣಗೌಡ ಪೊಲೀಸ್ ಪಾಟೀಲ್, ಬಳ್ಳಾರಿ ಜಿಲ್ಲಾ ಸಂಚಾಲಕ ಕಪಗಲ್ ಚಂದ್ರಶೇಖರ ಆಚಾರ್, ಸಂಘಟನಾ ಕಾರ್ಯದರ್ಶಿ ಸಿದ್ದರಾಮ ಸಿರಿಗೇರಿ ಮತ್ತು ವೀರೇಶ್ ಮೊದಲಾದವರು ಇದ್ದರು.