
೨೮ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ – ೧೨ ಮಂದಿಗೆ ಕನ್ನಡ ಕಸ್ತೂರಿ ಸನ್ಮಾನ
ಸುಳ್ಯ:ಸೃಜನಶೀಲತೆಯ ಮೂಲಕ ಕನ್ನಡದ ಉಳಿಯಬೇಕು. ಕಲೆ ಸಾಹಿತ್ಯದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣ ಆಗುವ ಮೂಲಕ ಸಾಹಿತ್ಯ ಸಮ್ಮೇಳನದೊಂದಿಗೆ ಸಾಂಸ್ಕೃತಿಕ ಸಮ್ಮೇಳನಗಳು ನಡೆಯಬೇಕು ಎಂದು ಸಾಹಿತಿ, ನಾಟಕಕಾರ ರಘುನಂದನ್ ಬೇಳೂರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ, ಸಮ್ಮೇಳನ ಸ್ವಾಗತ ಸಮಿತಿ ಕುಕ್ಕುಜಡ್ಕ ಆಶ್ರಯದಲ್ಲಿ ಕುಕ್ಕುಜಡ್ಕದ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ನಡೆದ ೨೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾರೋಪ ಭಾಷಣ ಮಾಡಿದರು.
ಸಮಾರೋಪ ಸಮಾರಂಭ ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ವಹಿಸಿದ್ದರು. ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಕೆ.ಆರ್.ತೇಜಕುಮಾರ್ ಬಡ್ಡಡ್ಕ, ಚೊಕ್ಕಾಡಿ ಸಹಕಾರ ಸಂಘದ ಅಧ್ಯಕ್ಷ ಕೇಶವ ಕರ್ಮಾಜೆ, ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕುಜಡ್ಕ, ಸುಳ್ಯ ತಾ.ಪಂ.ಇಒ ರಾಜಣ್ಣ, ಕಸಾಪ ಮಾಜಿ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಮಾತನಾಡಿದರು.
ಕುಕ್ಕುಜಡ್ಕ ಚೊಕ್ಕಾಡಿ ಪ್ರೌಢಶಾಲೆಯ ಸಂಚಾಲಕ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕಸಾಪ ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೇರಾಲು,ಸಮ್ಮೇಳನ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ಪ್ರಸಾದ್ ಮಾಡಬಾಕಿಲು, ಕೋಶಾಧಿಕಾರಿ ಅರುಣ ಕುಮಾರ ಮುಂಡಾಜೆ, ಕಸಾಪ ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ, ಚಂದ್ರಮತಿ ಕೆ, ಕೋಶಾಧಿಕಾರಿ ದಯಾನಂದ ಆಳ್ವ, ಕಸಾಪ ಕೊಡಗು ಜಿಲ್ಲಾಧ್ಯಕ್ಷ ಕೇಶವ ಕಾಮತ್, ಸುಳ್ಯ ಹೋಬಳಿ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಪಂಜ ಹೋಬಳಿ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕಸಾಪ ಪದಾಧಿಕಾರಿಗಳಾದ ರಮೇಶ್ ನೀರಬಿದಿರೆ, ಶರೀಫ್ ಜಟ್ಟಿಪಳ್ಳ, ಸಂಕೀರ್ಣ ಚೊಕ್ಕಾಡಿ, ಲತಾಶ್ರೀ ಸುಪ್ರೀತ್ ಮೋಂಟಡ್ಕ, ಶಶ್ಮಿ ಭಟ್ ಅಜ್ಜಾವರ, ಕೇಶವ ಸಿ.ಎ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಕಸ್ತೂರಿ ಪುರಸ್ಕಾರ :
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕನ್ನಡ ಕಸ್ತೂರಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಾಹಿತ್ಯ ಮತ್ತು ಕೃಷಿ ಕ್ಷೇತ್ರದಲ್ಲಿ ಎಂ.ಟಿ.ಶಾಂತಿಮೂಲೆ, ಧಾರ್ಮಿಕ ಮತ್ತು ಸಂಘಟನೆಯಲ್ಲಿ ಆನೆಕಾರ ಗಣಪಯ್ಯ, ಹಿರಿಯ ಸಾಹಿತಿ ಸುಲೋಚನಾ.ಪಿ.ಕೆ, ರಂಗಭೂಮಿ ಮತ್ತು ಚಲನ ಚಿತ್ರ ಕ್ಷೇತ್ರದಲ್ಲಿ ಮೋಹನ ಶೇಣಿ, ಯಕ್ಷಗಾನ ಕ್ಷೇತ್ರದ ಶೇಖರ ಮಣಿಯಾಣಿ, ಗಣಕಯಂತ್ರ ಪರಿಣಿತ ವೈಕುಂಠ ಪ್ರಭು, ಶಿಲ್ಪಕಲೆ ಕ್ಷೇತ್ರದ ಶ್ರೀನಿವಾಸ ಮಾಸ್ಟರ್, ಸಹಕಾರ ಕ್ಷೇತ್ರದ ಚಂದ್ರಾ ಕೋಲ್ಚಾರ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹರೀಶ್ ಮೋಟುಕಾನ, ಕ್ರೀಡೆಯಲ್ಲಿ ಭವಾನಿ ವಸಂತ್, ಭೂತಾರಾಧನೆ ವಿಜಿತ್ ಮೈತ್ತಡ್ಕ, ವ್ಯಾಪಾರೋದ್ಯಮದಲ್ಲಿ ಇಬ್ರಾಹಿಂ ಸುಳ್ಯ ಅವರಿಗೆ ಕನ್ನಡ ಕಸ್ತೂರಿ ಸನ್ಮಾನ ಹಾಗೂ ಕ್ರೀಡಾ ಪಟು ಭಾನವಿ.ಪಿ.ಎಸ್‌ಗೆ ಕನ್ನಡ ಕಸ್ತೂರಿ ಗೌರವಾರ್ಪಣೆ ನೀಡಲಾಯಿತು.
ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿ, ತೇಜಸ್ವಿ ಕಡಪಳ ವಂದಿಸಿದರು. ಚಂದ್ರಮತಿ ಕೆ. ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ವೈಭವ, ಸಾಲು ಮರಗಳ ತಾಯಿ ತಿಮ್ಮಕ್ಕ ನಾಟಕ ಪ್ರದರ್ಶನಗೊಂಡಿತು.




























