Home ಜಿಲ್ಲೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು: ಅಹಿಂದ ಮುಖಂಡರ ಆಗ್ರಹ

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು: ಅಹಿಂದ ಮುಖಂಡರ ಆಗ್ರಹ

(ಸಂಜೆವಾಣಿ ಪ್ರತಿನಿಧಿಯಿಂದ)

ಬಳ್ಳಾರಿ, ಮೇ.28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಎರಡು ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿಯಬೇಕು ಎಂದು ಕುರುಬ ಸಮಾಜದ ಹಾಗೂ ಅಹಿಂದ ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ.

ನಗರದ ಜಿಲ್ಲಾ ಕುರುಬ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಕುರುಬ ಸಂಘದ ಅಧ್ಯಕ್ಷ ಡಾ.ಪಿ.ಎಲ್.ಗಾದಿಲಿಂಗನಗೌಡ, ಪ್ರಧಾನ ಕಾರ್ಯದರ್ಶಿ ಅಲ್ಲಿಪುರದ ಕೆ.ರ್ಮೊಹನ್ ಮೊದಲಾದವರು. ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿರುವ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತಮ್ಮ ನಿರ್ಧಾರವನ್ನು ಬದಲಿಸದಿದ್ದರೆ 2028ರ ಚುನಾವಣೆಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಶಕ್ತಿಯನ್ನು ಕಾಂಗ್ರೆಸ್ಗೆ ತೋರಿಸಲಾಗುವುದು ಎಂದು ಎಚ್ಚರಿಸಿದರು. ಸಿದ್ದರಾಮಯ್ಯ ಅವರು ಜನಪರ ಯೋಜನೆಗಳ ಮೂಲಕ ಎಲ್ಲ ವರ್ಗಗಳ ವಿಶ್ವಾಸ ಗಳಿಸಿದ್ದಾರೆ. ಅವರನು ಸಿಎಂ ಸ್ಥಾನದಿಂದ ತೆಗೆದು ಹಾಕುವ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕೇಂದರು.

ಪ್ರಧಾನ ಕಾರ್ಯದರ್ಶಿ ಕೆ. ಮೋಹನ್ ಮಾತನಾಡಿ, ನಿರ್ಧಾರವನ್ನು ಬದಲಾಯಿಸದಿದ್ದರೆ ಅಹಿಂದ ಹಾಗೂ ಕುರುಬ ಸಮಾಜ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ ಹೇಳಿದರು.

ಸಿದ್ದರಾಮಯ್ಯ ಅವರನ್ನು ದೇವರಾಜ್ ಅರಸು ಮಾದರಿಯ ಆಡಳಿತಗಾರ ಎಂದು ಹೊಗಳಿದ್ದು, ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿರುವುದನ್ನು ದೇಶವೇ ಗಮನಿಸುತ್ತಿದೆ ಎಂದು ಹೇಳಿದರು. ಕುರುಬ ಸಮಾಜದ ಮುಖಂಡರು ಇದ್ದರು.