
ಕುಂದಾಪುರ: ತಾಲೂಕಿನ ಸಿದ್ದಾಪುರದ ಜನ್ಸಾಲೆ ಎಂಬಲ್ಲಿ ಕಾರ್ಯಚರಿಸುತ್ತಿರುವ ಪ್ರಸಿದ್ಧವಾದ ಮಧು ಆಯಿಲ್ ಮಿಲ್‌ನಲ್ಲಿ ಬುಧವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ.
ಬುಧವಾರ ತಡರಾತ್ರಿ ಹೊತ್ತಿಗೆ ಶ್ರೀ ಮಧುಮಾಯ ಆಯಿಲ್ಸ್(ಮಧು) ಪ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್‌ನಿಂದ ತಲಾ ಒಂದೊಂದು ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಸ್ಥಳೀಯರ ಸಹಕಾರದಲ್ಲಿ ರಾತ್ರಿಯಿಂದ ಬೆಳಿಗ್ಗೆ ೯ ಗಂಟೆಯವರೆಗೆ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ತೆಂಗಿನೆಣ್ಣೆ ಆದ ಕಾರಣ ಬೆಂಕಿ ತೀವೃತೆ ಜಾಸ್ಥಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.




























