
ಬೆಂಗಳೂರು, ಜೂನ್ ೩: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಸುಬ್ರಮಣ್ಯನಗರದ ಸಂಗೊಳ್ಳಿ ರಾಯಣ್ಣ ಉದ್ಯಾನವನದ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ವೆಂಕಟಚಲಪತಿ ಅವರ ನೇತೃತ್ವದಲ್ಲಿ ಭವ್ಯ ಸಂಭ್ರಮಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ೧೦ ಸಾವಿರ ಲಾಡುಗಳನ್ನು ವಿತರಿಸಿ ಸಿಎಂ ಪದಗ್ರಹಣವನ್ನು ವಿಶೇಷವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಲ್ಲೇಶ್ವರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನೂಪ್ ಅಯ್ಯಂಗಾರ್ ಭಾಗವಹಿಸಿ ಸಾರ್ವಜನಿಕರಿಗೆ ಲಾಡು ವಿತರಿಸಿದರು. ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಾಚರಣೆಗೆ ಸಾಕ್ಷಿಯಾದರು.
ಈ ವೇಳೆ ಮಾತನಾಡಿದ ಅನೂಪ್ ಅಯ್ಯಂಗಾರ್ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮತ್ತು ನವಚೈತನ್ಯ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಅವರ ಕೊಡುಗೆ ಅಪಾರವಾಗಿದೆ” ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ವೆಂಕಟಚಲಪತಿ ಮಾತನಾಡಿ, “ಯುವಕರ ಆಶಾಕಿರಣ, ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಅಪಾರ ದೈವಭಕ್ತರಾದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ನಾಡಿನ ಕೋಟ್ಯಂತರ ಜನರ ಕನಸು ನನಸಾದ ಕ್ಷಣವಾಗಿದೆ. ಇದು ಕಾಂಗ್ರೆಸ್ ಕಾರ್ಯಕರ್ತರ ಹೋರಾಟ, ತ್ಯಾಗ ಮತ್ತು ನಿಷ್ಠೆಗೆ ಸಂದ ಗೌರವವಾಗಿದೆ” ಎಂದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ವೆಂಕಟಚಲಪತಿ, ಶ್ರೀ ಟಿ ಮಹೇಶ್ ಕುಮಾರ್ ಬ್ಲಾಕ್ ಅಧ್ಯಕ್ಷರಾದ ಸೋಮಶೇಖರ್ ,ಮೋಹನ್ ರಾವ್, ನವೀನ್, ರಮೇಶ್, ಕೇಶವ ಪ್ರಸಾದ್, ಮಹೇಶ್, ನಂದ , ರವಿ, ಯಶು, ಪ್ರಭು,ಹಾಗೂ ಮಹಿಳಾ ಕಾರ್ಯಕರ್ತರಾದ ಬ್ಲಾಕ್ ಕಾಂಗ್ರೆಸ್ ನ ಶ್ರೀಮತಿ ಸುನಿತಾ, ಉಷಾ, ರಾಣಿ, ಸುಮಾ, ರತಿ, ದೀಪು, ಬಾನು,ಸ್ಥಳೀಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮಲ್ಲೇಶ್ವರ ಪ್ರದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿಪದದ ಪದಗ್ರಹಣವನ್ನು ಜನರು ಸಂಭ್ರಮದಿಂದ ಸ್ವಾಗತಿಸಿದರು.























