
ಸಂಜೆವಾಣಿ ನ್ಯೂಸ್
ಮೈಸೂರು: ಜೂ.21:- ಬಿಜೆಪಿ ಜಿಲ್ಲಾಧ್ಯಕ್ಷ ಜಿಲ್ಲಾಧ್ಯಕ್ಷ ಕೆ.ಎನ್.ಸುಬ್ಬಣ್ಣ ಶುಕ್ರವಾರ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಅವರು, ಸೋಮವಾರ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಪಕ್ಷದ ರಾಜ್ಯಾಧ್ಯಕ್ಷರು ಎಲ್ಲಾ ಜಿಲ್ಲಾಧ್ಯಕ್ಷರುಗಳಿಗೆ ಪಕ್ಷ ಸಂಘಟಿಸುವಂತೆ ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಎಲ್ಲರ ಸಹಕಾರ ಪಡೆದು ನನಗೆ ನೀಡಿರುವ ಜವಾಬ್ದಾರಿ ನಿಭಾಯಿಸುತ್ತೇನೆ ಎಂದರು.
ಹಿಂದೆ ವರುಣ, ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ, ರಾಜ್ಯದಲ್ಲಿ ಯಡಿಯೂರಪ್ಪ ಮಾರ್ಗದರ್ಶನ, ವಿಜಯೇಂದ್ರ ನೇತೃತ್ವದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಸ್ಥಳೀಯ ಸಂಸ್ಥೆ ಚುನಾವಣೆ ಕೂಡ ಬರಲಿದ್ದು, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಹೇಳಿದರು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಗುರುಸ್ವಾಮಿ, ಸಿದ್ದವೀರಪ್ಪ, ಕೆಂಪಣ್ಣ, ಪ್ರಧಾನ ಕಾರ್ಯದರ್ಶಿ ಕಿರಣ್ ಜಯರಾಮೇಗೌಡ, ಜಿಲ್ಲಾ ವಕ್ತಾರ ದಯಾನಂದ ಪಟೇಲ್, ಕೃಷ್ಣಪ್ಪ ಗೌಡ್ರು, ಮೂಡಲಪುರ ನಂದೀಶ್, ಶಿವರಾಂ, ವಿನಯ್, ಬೊಮ್ಮಾಯಿ, ಪಾಪಣ್ಣ ಅರ್ಜುನ್ ಇದ್ದರು.