Home ಜಿಲ್ಲೆ ಮಂಗಳೂರು ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರೌಢ ಶಾಲಾ ವಾಲಿಬಾಲ್ ಪಂದ್ಯಾಟ

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರೌಢ ಶಾಲಾ ವಾಲಿಬಾಲ್ ಪಂದ್ಯಾಟ

ಸುಳ್ಯ:ಶಾಲಾ ಶಿಕ್ಷಣ ಇಲಾಖೆ ಹಾಗೂ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪ್ರೌಢ ಶಾಲಾ ೧೭ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ನಡೆಯಿತು

ಪಂದ್ಯಾಟವನ್ನು ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ ಎಂ.ಮುಸ್ತಾಫ ಉದ್ಘಾಟಿಸಿ ಮಾತನಾಡಿ ಜೀವನದಲ್ಲಿ ಶಿಸ್ತು, ಕಲಿಕೆಯಲ್ಲಿ ಏಕಾಗ್ರತೆ, ಕ್ರೀಡಾ ಸ್ಫೂರ್ತಿ ವಿದ್ಯಾರ್ಥಿಗಳ ಸಾಧನೆಗೆ ಪೂರಕ. ಸ್ಪರ್ಧೆಗಳಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ ಅದರೆಡರನ್ನು ಸಮಾನವಾಗಿ ಸ್ವೀಕರಿಸಿ ಸ್ಪರ್ಧಾ ಮನೋಭಾವದಿಂದ ಪಂದ್ಯಾಟದಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ರೆ. ಫಾ. ಓಲ್ವಿನ್ ಎಡ್ವರ್ಡ್ ಡಿ’ಕುನ್ನ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್‌ನ ಅಧ್ಯಕ್ಷ ಜಯಪ್ರಕಾಶ್ ಕುಡೆಕಲ್ಲು, ನ.ಪಂ. ಮಾಜಿ ಸದಸ್ಯರಾದ ಡೇವಿಡ್ ಧೀರ ಕ್ರಾಸ್ತಾ, ಸಿಆರ್‌ಪಿ ಮಮತಾ, ಸೈಂಟ್ ಜೋಸೆಫ್ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಪ್ರಸನ್ನ ಪೀಟರ್ ಡಿ’ಸೋಜಾ, ರಾಜೇಶ್, ಛಾಯ, ಸಂತ ಬ್ರಿಜಿಟ್ಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸುನಿಲ್ ಮಸ್ಕರೇನಸ್, ಸುಳ್ಯ ತಾಲೂಕು ಗ್ರೇಡ್ ೧ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮನಾಭ ಎಡಮಂಗಲ ಉಪಸ್ಥಿತರಿದ್ದರು.

ಸುಳ್ಯ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕಣಾಧಿಕಾರಿ ಸುಜಯ ಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ಸ್ಟೆಲ್ಲಾ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪವೇಣಿ ಹುದೇರಿ, ಉಮೇಶ್ ಪಂಜದ ಬೈಲು, ಸಹಕರಿಸಿದರು. ಶಿಕ್ಷಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.