ಸುಳ್ಯ ಕನ್ನಡ ಸಾಹಿತ್ಯ ಸಮ್ಮೇಳನಾದ್ಯಕ್ಷರಾಗಿ ಸಾಹಿತಿ ತೇಜಕುಮಾರ್ ಬಡ್ಡಡ್ಕ ಆಯ್ಕೆ

ಸುಳ್ಯ:ಸುಳ್ಯ ತಾಲೂಕು ೨೮ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ತೇಜಕುಮಾರ್ ಬಡ್ಡಡ್ಕ ಆಯ್ಕೆಯಾಗಿದ್ದಾರೆ.
ಕನ್ನಡ ಭವನದಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆಯಲ್ಲಿ ನಡೆದ ಕಸಾಪ ಪೂರ್ವಾಧ್ಯಕ್ಷರುಗಳು, ಸಾಹಿತ್ಯ ಸಮ್ಮೇಳನದ ಪೂರ್ವಾಧ್ಯಕ್ಷರಗಳು ಹಾಗೂ ಕಸಾಪ ಪದಾಧಿಕಾರಿಗಳ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಡಿ.೩೦ರಂದು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದಲ್ಲಿ ಸುಳ್ಯ ತಾಲೂಕು ೨೮ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.