
ಸುಳ್ಯ:ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಸರಕಾರದ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿಯ ಖಾಯಂ ಸದಸ್ಯ ಅಶೋಕ ಪ್ರಭು ವಿದ್ಯಾರ್ಥಿ ಸರಕಾರವನ್ನು ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ನೂತನ ಕಾರ್ಯಾಧ್ಯಕ್ಷ ಎಂ.ಬಿ. ಸದಾಶಿವ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ೨೦೨೫-೨೬ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ೬೮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಅಲ್ಲದೇ
ಕಾಲೇಜು ಅಭಿವೃದ್ಧಿ ಸಮಿತಿಯ ನಿಕಟಪೂರ್ವ ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ ಅವರನ್ನು ಸನ್ಮಾನಿಸಲಾಯಿತು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪಿ.ಬಿ. ಸುಧಾಕರ ರೈ ಮಾತನಾಡಿದರು. ಪ್ರಾಂಶುಪಾಲ ಮೋಹನ ಗೌಡ ಬೊಮ್ಮೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಅಹಮ್ಮದ್ ಕಬೀರ್, ಕೃಷ್ಣಪ್ಪ ನಾಯ್ಕ, ಜಯಂತ್ ಹಾಗೂ ಹಿರಿಯ ಉಪನ್ಯಾಸಕರಾದ ಕೃಷ್ಣ ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕ ಶಿವರಾಮ ನಾಯ್ಕ ಕೆ. ಸ್ವಾಗತಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ಜಯಶ್ರೀ ವಂದಿಸಿದರು. ಉಪನ್ಯಾಸಕಿ ಸತ್ಯವತಿ ಕಾರ್ಯಕ್ರಮ ನಿರೂಪಿಸಿದರು.

































