Home ಜಿಲ್ಲೆ ಮೈಸೂರು ಸುಸ್ಥಿರ ಅಭಿವೃದ್ಧಿ ಗುರಿಗಳು ಕೇವಲ ಕನಸು

ಸುಸ್ಥಿರ ಅಭಿವೃದ್ಧಿ ಗುರಿಗಳು ಕೇವಲ ಕನಸು

ಸಂಜೆವಾಣಿ ನ್ಯೂಸ್
ಮೈಸೂರು: ಮಾ.20:-
ಪ್ರಸ್ತುತ ಹಲವು ದೇಶಗಳು ಎದುರಿಸುತ್ತಿರುವ ಆರ್ಥಿಕ ಅಡತಡೆಗಳು ಮತ್ತು ಭೀತಿ ಸ್ಥಿತಿಗತಿಗಳನ್ನು ಗಮನಿಸಿದರೆ ಸುಸ್ಥಿರ ಅಭಿವೃದ್ಧಿ ಗುರಿಗಳು ಕೇವಲ ಕನಸಾಗಲಿದೆ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ಸಂದರ್ಶಕ ಪ್ರಾಧ್ಯಾಪಕ ಪೆÇ್ರ.ರವಿ ಭಂಡಾರಿ ಆತಂಕ ವ್ಯಕ್ತಪಡಿಸಿದರು.


ನಗರದ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ವತಿಯಿಂದ ಬುಧವಾರ ನಡೆದ ಸುಸ್ಥಿರ ಅಭಿವೃದ್ಧಿ ಗುರಿ ಕುರಿತ ಒಂದು ದಿನ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಯಾವುದೇ ಒಂದು ದೇಶ, ಸಮಾಜ ಅಭಿವೃದ್ಧಿ ಕಾಣಬೇಕಾದರೆ ಕೇವಲ ಆರ್ಥಿಕವಾಗಿ ಮುಂದುವರೆದರೆ ಸಾಲದು. ಸುಸ್ಥಿರವಾಗಿ ಅಭಿವೃದ್ಧಿ ಕಂಡಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.


ಜಗತ್ತು ಇಂದು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟು, ಪರಿಸರ ಬಿಕ್ಕಟ್ಟು, ಸಂಪನ್ಮೂಲ ಬಿಕ್ಕಟ್ಟು, ಇಂಧನ ಬಿಕ್ಕಟ್ಟು ಮತ್ತು ಮಿಲಿಟರೀಕರಣದ ಬಿಕ್ಕಟ್ಟುಗಳನ್ನು ಗಮನಿಸಿದರೆ ಸುಸ್ಥಿರ ಅಭಿವೃದ್ದಿಯಲ್ಲಿ ದೇಶಗಳ ಬೆಳವಣಿಗೆ ವಿರೋಧವಾಗಿವೆ ಎಂದು ಹೇಳಿದರು.
ಮೂಲಭೂತವಾಗಿ ಒಂದು ದೇಶ ಬೆಳವಣಿಗೆಯಾಗಬೇಕಿದ್ದರೆ, ಆ ದೇಶ ಪರಿಸರದ ನಡುವಿನ ಸಂಬಂಧವನ್ನು ಉತ್ತಮವಾಗಿ ಇಟ್ಟುಕೊಂಡಿರಬೇಕು. ಸಂಪನ್ಮೂಲಗಳ ದುರುಪಯೋಗದಿಂದ ಮಾಲಿನ್ಯ ಹೆಚ್ಚುತಿದ್ದು, ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಸುಸ್ಥಿರ ಅಭಿವೃದ್ದಿ ಅತ್ಯಗತ್ಯ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವೆ ಎಂ.ಕೆ.ಸವಿತಾ ಮಾತನಾಡಿ, ನಮ್ಮ ಭವಿಷ್ಯವನ್ನು ಉತ್ತಮವಾಗಿ ಕಟ್ಟಿಕೊಳ್ಳಬೇಕಾದರೆ, ಹೆಚ್ಚಿನ ಜ್ಞಾನಾರ್ಜನೆ ಅತ್ಯವಶ್ಯಕ. ಅತ್ಯಾಧುನಿಕ ಕಾಲದಲ್ಲಿ ಪ್ರತಿ ನಿತ್ಯ ಬದಲಾವಣೆಗೆ ಒಗ್ಗಿಕೊಳ್ಳಬೇಕಿದೆ. ತಂತ್ರಜ್ಞಾನವನ್ನು ಹೆಚ್ಚು ಸಕರಾತ್ಮಕವಾಗಿ ಬಳಸಿಕೊಳ್ಳಬೇಕಿದೆ ಎಂದರು.
ಅಂಕಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಕೌಶಲಗಳು, ಜ್ಞಾನ ಅತ್ಯಂತ ಮುಖ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಕಲಿಕೆ ಹೆಚ್ಚು ಒತ್ತು ನೀಡಬೇಕಿದೆ. ಆದರೆ ಸಾಮಾಜಿಕ ಮಾಧ್ಯಮಗಳ ಗೀಳಿಗೆ ಇವತ್ತಿನ ಯುವ ಜನಾಂಗ ಜೋತು ಬಿದ್ದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.


ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ಮುಖ್ಯಸ್ಥೆ ಪೆÇ್ರ.ನವೀತಾ ತಿಮ್ಮಯ್ಯ, ಹಿರಿಯ ಪ್ರಾಧ್ಯಾಪಕ ಡಾ.ಎಂ.ಮಹೇಶ, ಪ್ರಾಧ್ಯಾಪಕ ಡಾ.ಎಂ.ವಿ.ದಿನೇಶ್ ಕಾರ್ಯಕ್ರಮದಲ್ಲಿ ಇದ್ದರು.