ಸಂಜೆವಾಣಿ ವಾರ್ತೆ
ಮಂಡ್ಯ:ಆ.29:- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮೀಕ್ಷೆ ಕೈಗೊಳ್ಳುವ ಬಗ್ಗೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಡಿಜಿಟಲ್ ವಿಧಾನದಲ್ಲಿ ಜನರ ಹಾಗೂ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸಲಾಗುವುದು ಎಂದರು.
ಸಮೀಕ್ಷೆಯು ಜನರ ಸ್ಥಿತಿಗತಿಗಳನ್ನು ತಿಳಿದುಕೊಂಡು ವಿವಿಧ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ರೂಪಿಸಲು ಸಹಾಯಕ ವಾಗಿರುತ್ತದೆ.ಸಾರ್ವಜನಿಕರು ಸಮೀಕ್ಷಯ ಸಂದರ್ಭದಲ್ಲಿ ನಿಖರ ಮಾಹಿತಿ ನೀಡುವುದರೊಂದಿಗೆ ಜಿಲ್ಲಾಡಳಿತದೊಂದಿಗೆ ಸಹಕರಿ ಸುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ತಿಳಿಸಿದರು.
ವಿದ್ಯುತ್ ಮೀಟರ್ ರೀಡರ್‍ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯ ಪ್ರಾರಂಭವಾಗುತ್ತಿದೆ.ಜಿಲ್ಲೆಯ ಜನರು ವಾಸಿಸುವ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ವಿರುವುದರಿಂದ ವಾಸದ ಮನೆಗಳ ಆರ್. ಆರ್.ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆ ಸಮೀಕ್ಷೆಯಿಂದ ವಂಚಿತವಾಗುವುದಿಲ್ಲ.ಈ ಹಿನ್ನಲೆಯಲ್ಲಿ ವಿದ್ಯುತ್ ಮೀಟರ್ ರೀಡರ್‍ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಮಾಡಲಾಗುವುದು ಎಂದರು.
ಇಂಧನ ಇಲಾಖೆಯ ಸಹಕಾರ ದೊಂದಿಗೆ ಮೀಟರ್ ರೀಡರ್ ಮೂಲಕ ಮನೆಗಳ ಪಟ್ಟಿ (ಊouse ಟisಣiಟಿg) ಮಾಡಲಾಗುತ್ತದೆ. ನಂತರ ಸರ್ವೆಯನ್ನು ಕೈಗೆತ್ತಿಕೊಳ್ಳ ಲಾಗುವುದು.ಪಟ್ಟಿ ತಯಾರಿಸುವಾಗ ಯಾವುದೇ ಮನೆಗಳು ಬಿಟ್ಟು ಹೋಗದಂತೆ ಎಚ್ಚರಿಗೆ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.
ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಸಲಾಗುವುದು.ಈ ಸಮಯದಲ್ಲಿ ಶಾಲಾ ರಜಾದಿನಗಳು ಇರುವುದರಿಂದ ಸಮೀಕ್ಷೆ ಕಾರ್ಯಕ್ಕೆ ಪೂರಕವಾಗಿರುತ್ತದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ,ಅಪರ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.




























