
ಮಂಗಳೂರು- ಬದುಕುವ ಹಕ್ಕು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದ್ದು, ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಂಡು ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ ಟಿ ತಿಪ್ಪೇಸ್ವಾಮಿ ನಿರ್ದೇಶನ ನೀಡಿದರು.
ಅವರು ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿಯಲ್ಲಿ ನಡೆದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಡೆ ಕಾಯ್ದೆ ತಂತ್ರ ವಿಧಾನಗಳ ಕಾಯಿದೆ ಅನುಷ್ಠಾನದ ಪರಿಶೀಲನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭ್ರೂಣಲಿಂಗ ಪತ್ತೆ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಪಿಸಿಪಿಎನ್‌ಡಿಟಿ ಕಾಯ್ದೆಯನ್ನು ಉಲ್ಲಂಘಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್‍ಗಳ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಖಾಸಗಿ ನಸಿರ್ಂಗ್ ಹೋಮ್‌ಗಳಲ್ಲಿ ಮಕ್ಕಳ ಸಹಾಯವಾಣಿ ೧೦೯೮ ಸಂಖ್ಯೆಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಸರಕಾರಿ ಮತ್ತು ಖಾಸಗಿ ನಸಿರ್ಂಗ್ ಹೋಮ್ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಯಲು ಪಿಸಿಪಿಎನ್‌ಡಿಟಿ ಕಾಯ್ದೆಯಡಿ ಲಿಂಗ ಪರೀಕ್ಷೆ ಮಾಡಲಾಗುವುದಿಲ್ಲ ಮತ್ತು ಶಿಕ್ಷಾರ್ಹ ಅಪರಾಧ ಎಂದು ಸ್ಥಳೀಯ ಭಾ?ಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಕಡ್ಡಾಯವಾಗಿ ನೋಂದಾಯಿಸಿಕೊಂಡು ಫಾರ್ಮ್ ಎಫ್‌ನಲ್ಲಿ ದಾಖಲೆಗಳನ್ನು ನಿರ್ವಹಿಸಬೇಕು. ದ.ಕ ಜಿಲ್ಲಾ ಸಲಹಾ ಸಮಿತಿ ಸಭೆಗಳನ್ನು ನಿಗದಿತ ಸಮಯದಲ್ಲಿ ನಡೆಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಗರ್ಭಪಾತ ಅಥವಾ ಲಿಂಗ ಪರೀಕ್ಷೆಗೆ ಪ್ರೇರೇಪಿಸುವ ಆಸ್ಪತ್ರೆಗಳ ವಿರುದ್ಧ ದೂರು ನೀಡುವ ಮಾಹಿತಿದಾರರಿಗೆ ಸರಕಾರದಿಂದ ೧ ಲಕ್ಷ ರೂಪಾಯಿ ನೀಡಲಾಗುತ್ತದೆ ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಮಕ್ಕಳ ಮಾರಾಟ ಮಾಡಿದ್ದಲ್ಲಿ ೨೦೨೦ ಸೆಕ್ಷನ್ ೧೮ ರ ಪ್ರಕಾರ ದಂಡ ವಿಧಿಸಬಹುದು ಎಂದು ಅವರು ಹೇಳಿದರು. ಗರ್ಭಿಣಿ ಮಹಿಳೆಯು ಸ್ಕ್ಯಾನಿಂಗ್‌ಗೆ ಬರುವಾಗ ತಾಯಿ ಕಾರ್ಡ್ ಪಡೆದುಕೊಂಡಲ್ಲಿ ಮಾತ್ರ ಜನನ ಪ್ರಮಾಣ ಪತ್ರ ನೀಡುವ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಅವರು ತಿಳಿಸಿದರು. ಹದಿಹರೆಯದ ಗರ್ಭಿಣಿಯರಿಗೂ ಭ್ರೂಣಲಿಂಗ ಪತ್ತೆಗೂ ಸಾಮ್ಯತೆ ಇರುವುದರಿಂದ ಪಿಸಿಪಿಎನ್‌ಟಿಟಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನು??ಠನ ಮಾಡಬೇಕೆಂದು ಕೆ.ಟಿ ತಿಪ್ಪೇಸ್ವಾಮಿ ಅವರು ಸೂಚಿಸಿದರು.
ಎರಡು ಹೆಣ್ಣು ಮಕ್ಕಳ ನಂತರ ಮೂರನೇ ಗರ್ಭಿಣಿಯಾದಲ್ಲಿ ತಾಯಿ ಕಾರ್ಡು ನೀಡಿದ್ದಲ್ಲಿ ಆ ಗರ್ಭಿಣಿಯ ಸಹಜ ಹೆರಿಗೆ ಆಗಿದೆಯೇ, ಶಿಶು ಹೊಟ್ಟೆಯಲ್ಲಿ ಮರಣ ಹೊಂದಿರುವ್ಯದೇ, ಆಕಸ್ಮಿಕ ಗರ್ಭಪಾತವಾಗಿದೆಯೇ ಅಥವಾ ವೈದ್ಯಕೀಯ ಗರ್ಭಪಾತ ಆಗಿದೆಯೇ ಎಂಬುದರ ಅಂತಿಮ ಫಲಶ್ರುತಿ ಬಗ್ಗೆ ಮಾಹಿತಿ ಪಡೆಯಲು ಅವರು ಸೂಚಿಸಿದರು.
ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆ ಉಲ್ಲಂಘನೆಯಡಿಯಲ್ಲಿ ಮಾರ್ಚ್ ೨೦೨೫ ರಿಂದ ಜನವರಿ ೨೦೨೬ ರವರೆಗೆ ಒಟ್ಟು ೬೯ ನೋಟಿಸುಗಳನ್ನು ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಕ್ಯಾನಿಂಗ್ ಸಂಸ್ಥೆಯನ್ನು ಭೇಟಿ ಮಾಡಿ ಪರಿಶೀಲನೆ ನಡೆಸಿದಾಗ ಪಿಸಿಪಿಎನ್‌ಡಿಟಿ ಕಾನೂನು ಮತ್ತು ಕಾಯ್ದೆ ಅನು??ಠನ ಮಾಡುವಲ್ಲಿ ನ್ಯೂನ್ಯತೆಗಳು ಕಂಡು ಬಂದಾಗ ಅಂತಹ ಸ್ಕ್ಯಾನಿಂಗ್ ಸಂಸ್ಥೆಗಳಿಗೆ ನೋಟಿಸ್ ನೀಡಿ ಸರಿಪಡಿಸಲಾಗುತ್ತಿದೆ. ಫಾರ್ಮ್ ಎಫ್ ಅಕ್ರಮಗಳು ಕಂಡು ಬಂದಿರುವುದಿಲ್ಲ. ಫಾರ್ಮ್ ಎಫ್‌ಗಳನ್ನು ಕಾಲಕಾಲಕ್ಕೆ ಆಡಿಟ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದೀಪಾ ಪ್ರಭು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದಲ್ಲಿ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆ ಮತ್ತು ಕಾನೂನಿನ ಕುರಿತು ಸಂಸ್ಥೆಯ ಮಾಲೀಕರಿಗೆ ರೇಡಿಯೋಲಜಿಸ್ಟ್, ಗೈನಕಾಲಜಿಸ್ಟ್‌ಗಳಿಗೆ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ.
ತಾಲೂಕು ಮಟ್ಟದಲ್ಲಿ ಹಾಗೂ ಗ್ರಾಮ ಮಟ್ಟದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತರಿಗೆ ಆರೋಗ್ಯ ಕಾರ್ಯಕರ್ತರಿಗೆ ಪಿಸಿಪಿಎನ್‌ಡಿಟಿ ಕಾಯ್ದೆ ಮತ್ತು ಕಾನೂನಿನ ಕುರಿತು ಮಾಹಿತಿ ನೀಡಲಾಗುತ್ತಿದೆ.
ಲಿಂಗಾನುಪಾತ ಕಡಿಮೆ ಹಾಗೂ ಹೆಚ್ಚಿರುವ ಗ್ರಾಮಗಳನ್ನು ಗುರುತಿಸಿ ಲಿಂಗಾನುಪಾತ ಕುಸಿತಕ್ಕೆ ಕಾರಣ ಕಂಡುಹಿಡಿಯಲು ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜ್ ಆಸ್ಪತ್ರೆ ಸಮುದಾಯ ಆರೋಗ್ಯ ವಿಭಾಗದಿಂದ ಅಧ್ಯಯನ ನಡೆಸಲು ಕ್ರಮಕೈಗೊಳ್ಳಾಗುತ್ತಿದೆ ಎಂದು ಅವರು ಹೇಳಿದರು. ಶಾಲಾ ಕಾಲೇಜು ಮಕ್ಕಳಿಗೆ ಪಿಸಿಪಿಎನ್‌ಡಿಟಿ ಕಾಯ್ದೆ ಮತ್ತು ಕಾನೂನಿನ ಕುರಿತು ಪೊಸ್ಟರ್ ಮತ್ತು ಸ್ಲೋಗನ್ ಸ್ಪರ್ಧೆಗಳನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಎಂದು ನಡೆಸಲಾಗಿರುತ್ತದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಚರಿಸಲಾಗುತ್ತಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ (ಪಿ.ಎನ್.ಡಿ.ಟಿ)ಡಾ.ಅಮೃತಾ ಭಂಡಾರಿ, ಜಿಲ್ಲಾ ತಪಾಸಣಾ & ಮೇಲ್ವಿಚಾರಣಾ ಸಮಿತಿ ಸದಸ್ಯೆ ಡಾ.ಸುಂದರಿ, ಡಾ.ಅನಿತ್‌ರಾಜ್, ಜಿಲ್ಲಾ ಸಲಹಾ ಸಮಿತಿ ಸದಸ್ಯರಾದ ಡಾ.ನಂಜೇಶ್ ಕುಮಾರ್, ಡಾ.ಚಿದಾನಂದ ಮೂರ್ತಿ, ವಸಂತ ಪೆರಾಜೆ, ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಸೂಚನೆ

























