
ಸಂಜೆವಾಣಿ ವಾರ್ತೆ
ನಂಜನಗೂಡು: ನ.06:- ತಾಲ್ಲೂಕಿನ ಹಂಚಿಪುರ ಗ್ರಾಮದ ಬಳಿ ಎರಡು ಹುಲಿಗಳು ಕಾಣಿಸಿಕೊಂಡ ಪರಿಣಾಮ ಸುತ್ತಮುತ್ತಲಿನ ಪ್ರದೇಶದ ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಉಂಟಾಯಿತು.
ಈ ವಿಷಯ ತಿಳಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ನಂಜನಗೂಡು ಕ್ಷೇತ್ರದ ಜನಪ್ರಿಯ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ದೂರವಾಣಿ ಮೂಲಕ ಮಾಹಿತಿ ನೀಡಿ, ತಕ್ಷಣವೇ ಹುಲಿಯನ್ನು ಸೆರೆಹಿಡಿಯುವಂತೆ ಸೂಚನೆ ನೀಡಿದರು.
ಸಂಜೆಯ ವೇಳೆಗೆ ಹಂಚಿಪುರ ಮತ್ತು ಹೊಸವೀಡು ಗ್ರಾಮದ ಮಧ್ಯದಲ್ಲಿ ಅರಣ್ಯ ಇಲಾಖೆಯ ಅರವಳಿಕೆ ತಜ್ಞ ಶೂಟರ್‍ಗಳ ತಂಡ ಯಶಸ್ವಿಯಾಗಿ ಒಂದು ಹುಲಿಯನ್ನು ಸೆರೆಹಿಡಿಯಲು ಯಶಸ್ವಿಯಾಗಿದೆ. ಮತ್ತೊಂದು ಹುಲಿಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿದೆ.
ಅರಣ್ಯ ಅಧಿಕಾರಿಗಳೊಂದಿಗೆ ಶಾಸಕರು ದೂರವಾಣಿ ಮೂಲಕ ಮಾತನಾಡಿದ ಸಂದರ್ಭದಲ್ಲಿ ಅವರು ಉಳಿದ ಒಂದು ಹುಲಿಯನ್ನೂ ಶೀಘ್ರದಲ್ಲೇ ಸೆರೆಹಿಡಿಯುವುದಾಗಿ ತಿಳಿಸಿದ್ದಾರೆ.




























