Home ಜಿಲ್ಲೆ ಹಂಪಿ ಕವಿವಿಯಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಙಾವಿಧಿ ಸ್ವೀಕಾರ

ಹಂಪಿ ಕವಿವಿಯಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಙಾವಿಧಿ ಸ್ವೀಕಾರ

ಸಂಜೆವಾಣಿ ವಾರ್ತೆ

ಹೊಸಪೇಟೆ.ಮೇ. 22 ಹಂಪಿ ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿಯ ಸಿಂಡಿಕೇಟ್ ಸಭಾಂಗಣದಲ್ಲಿ ಗುರುವಾರ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು.

“ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ’’ ಎಂದು ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ.ವಿರುಪಾಕ್ಷಿ ಪೂಜಾರಹಳ್ಳಿ, ಪ್ರತಿಜ್ಙಾವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಕನ್ನಡ ವಿಶ್ವವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ವಿಶ್ವವಿದ್ಯಾಲಯದ ಪ್ರತಿಯೊಂದು ವಿಭಾಗಗಳಲ್ಲಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.