
ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.09- ಹಿಂದಿ ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಮಾಡಬೇಕು. ತೃತೀಯ ಭಾμÉಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿರುವ ರಾಜ್ಯ ಸರ್ಕಾರ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಪತ ಬರೆದಿರುವುದು ಕನ್ನಡ ವಿರೋಧಿ ಧೋರಣೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣದ ಅಧ್ಯಕ್ಷ ಎಚ್. ಎನ್. .ಮಂಜೇಶ್ ನೇತೃತ್ವದಲ್ಲಿ ಸಮಾವೇಶ ಗೊಂಡ ವೇದಿಕೆಯ ಪದಾಧಿಕಾರಿಗಳು ಜಿಲ್ಲಾಡಳಿತ ಭವನದ ಮುಂದೆ ಕೆಲ ಕಾಲ ಪ್ರತಿಭಟನೆ ನಡೆಸಿ, ರಾಜ್ಯ ಪಾಲ ತಾವರ್ ಚಂದ್ರ ಗೆಹ್ಲೋಟ್ ಅವರ ವಿರುದ್ದ ಘೋಷಣೆಗಳನ್ನು ಕೂಗಿದರು. ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಿದರು.
ಇದಕ್ಕು ಮುನ್ನಾ ಮಾತನಾಡಿ ಕರವೇ ಜಿಲ್ಲಾಧ್ಯಕ್ಷ ಎಚ್. ಎನ್. ಮಂಜೇಶ್ ಮಾತನಾಡಿ, ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಲ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಕರೆಸಿಕೊಳ್ಳಬೇಕು. ರಾಜ್ಯ ಸರ್ಕಾರ ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ತೃತೀಯ ಭಾμÉಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದು ತೀವ್ರ ಖಂಡನೀಯ ಎಂದರು.
ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ.
ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ಬೆಂಗಳೂರು ಸ್ಥಳೀಯ ಭಾμÉಗಳ ಸಂರಕ್ಷಣಾ ಸಂಘ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ದುಷ್ಟ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ಸುರಕ್ಷಿತ ಸ್ವರ್ಗವನ್ನಾಗಿಸುವ ಉದ್ದೇಶ ಇದೆ. ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ ಎಂದರು.
ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರ್ಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬೇಕಿಲ್ಲ ನಾವು ಹಿಂದೆ ಬ್ರಿಟಿμï ಸಾಮ್ರಾಜ್ಯ ಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ, ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಥಿತೆಯನ್ನು ಉಳಿಸಿಕೊಳ್ಳುತ್ತೇವೆ. ತೃತೀಯ ಭಾμÉ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರ ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ, ರಾಜ್ಯಪಾಲ ಗೆಹೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾμÉಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ, ಅμÉ್ಟೀಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾμÉಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾμÉಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ, ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲಿ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ ವಿ. ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೂಪೇಶ್, ರಾಘವೇಂದ್ರ, ಸಹ ಕಾರ್ಯದರ್ಶಿ ಅರ್ಜುನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ನಾಗರಾಜು, ಹೇಮಂತ್, ತಾಲೂಕು ಅಧ್ಯಕ್ಷರಾದ ಚಾ.ನಗರ ಸಂತೋಷ, ಗುಂಡ್ಲುಪೇಟೆ ರಮೇಶ್ ನಾಯಕ, ಕೊಳ್ಳೇಗಾಲ ಆಯಾಜ್ ಕನ್ನಡಿಗ, ಯಳಂದೂರು ಮಹೇಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಮೊದಲಾದರು ಇದ್ದರು.























