
ಸಂಜೆವಾಣಿ ವಾರ್ತೆ
ಬಳ್ಳಾರಿ, ಫೆ.13 ಜಿಲ್ಲೆಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಿನ್ನೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಆಂತರ್ ಪ್ರೌಢ ಶಾಲಾ ಕ್ರೀಡಾ ಕೂಟ ಕ್ರಿಕೆಟ್, ವಾಲಿಬಾಲ್, ಖೋಖೋ, ಫೋ ಬಾಲ್ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ಪ್ರಾರ್ಥನಾ ಗೀತೆಯೊಂದಿಗೆ ಮತ್ತು ಪ್ರಾಚಾರ್ಯರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮುಖ್ಯ ಅತಿಥಿಯಾಗಿ ಡಾ.ಅರವಿಂದ ಪಾಟೀಲ್ ಕಾರ್ಯದರ್ಶಿಗಳು ವೀವಿಸಂಘ ಬಳ್ಳಾರಿ ಮತ್ತು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪಲ್ಲೇದ ಪ್ರಭುಲಿಂಗರವರು ಆಗಮಿಸಿದ್ದರು ಜಿಲ್ಲೆಯ ವಿವಿಧ ಶಾಲೆಗಳಿಂದ ಬಂದಿದ್ದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಕ್ರೀಡೆಗಳಲ್ಲಿ ಭಾಗವಹಿಸಿದ್ದರು.
ಮುಖ್ಯ ಅತಿಥಿಗಳು ಮತ್ತು ಅಧ್ಯಕ್ಷರು ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನೀಯರನ್ನು ಉದ್ದೇಶಿಸಿ ಮಾತನಾಡುತ್ತಾ ಕ್ರೀಡೆ ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಿಕೊಳ್ಳಬಹುದು ಮತ್ತು ಎಲ್ಲರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಶ್ರೀಶೈಲಗೌಡ, ಶ್ರೀಮತಿ ಗೌಸೀಯಾ ಬೇಗಂ, ಎಲ್ಲಾ ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಈ ಕಾರ್ಯಕ್ರಮವನ್ನು ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದಿಂದ ಆಯೋಜಿಸಲಾಗಿತ್ತು ಭಾಷನ ವನ್ನು ನಿರೂಪಣೆಯನ್ನು ಶ್ರೀಮತಿ ಪಲ್ಲವಿ ಹಿರೇಮಠ, ಮತ್ತು ವಂದನಾರ್ಪಣೆಯನ್ನು ಕುಮಾರಿ ಹಿಮಬಿಂದು ನಿರ್ವಹಿಸಿದರು,
























