
ಸಂಜೆವಾಣಿ ವಾರ್ತೆ
ಬಳ್ಳಾರಿ, ಸೆ.26 ಜಿಲ್ಲೆಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನವನ್ನು ಆಚರಣೆ ಮಾಡಲಾಯಿತು.ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಕ್ರಮಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಎನ್.ಎಸ್.ಎಸ್ ಅಧಿಕಾರಿಯಾದ ರಾಜೇಶ್ ಕುಮಾರ್ ಜೆ.ಎಂ ಹಾಜರಿದ್ದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಯನ್ನು ಬೋಧಿಸಿದರು ಮತ್ತು ಅದರ ಆಚರಣೆಯು ಮಹಾತ್ಮಾ ಗಾಂಧೀಜಿಯವರ ಹುಟ್ಟು ಹಬ್ಬದ ಶತಮಾನೋತ್ಸವದ ನೆನಪಿಗಾಗಿ ಸಂಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಬಿ.ಶ್ರೀಶೈಲಗೌಡ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಹಾಜರಿದ್ದರು.
ಈ ಕಾರ್ಯಕ್ರಮದ ಆಯೋಜನೆ ಮತ್ತು ನಿರೂಪಣೆಯನ್ನು ಹೆಚ್.ಎಸ್.ಕೆ. ಪಾಲಿಟೆಕ್ನಿಕ್‍ನ ಎನ್.ಎಸ್.ಎಸ್ ಅಧಿಕಾರಿ ರಾಜೇಶ್ ಕುಮಾರ್ ಜೆ.ಎಂ ಹಾಗೂ ಸಮನ್ವಯ ಅಧಿಕಾರಿ ಕೆ.ಪಂಪನಗೌಡ ಅಯೋಜಿದ್ದರು.























